Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:16 - ಕನ್ನಡ ಸತ್ಯವೇದವು J.V. (BSI)

16 ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಪ್ರವಾದಿಯು ಈ ಮಾತುಗಳನ್ನು ಹೇಳಿದಾಗ ಅಮಚ್ಯನು, “ನಾವು ನಿನ್ನನ್ನು ಅರಸನ ಸಲಹೆಗಾರನನ್ನಾಗಿ ಮಾಡಲಿಲ್ಲವಲ್ಲಾ. ಆದ್ದರಿಂದ ಬಾಯಿಮುಚ್ಚಿಕೊಂಡು ಸುಮ್ಮನಿರು. ಇಲ್ಲದಿದ್ದರೆ ನೀನು ಸಾಯುವೆ” ಅಂದನು. ಆದರೆ ಅವನು, “ದೇವರು ನಿನ್ನನ್ನು ನಾಶಮಾಡಲು ನಿರ್ಧರಿಸಿದ್ದಾನೆ; ಯಾಕೆಂದರೆ ನೀನು ನನ್ನ ಸಲಹೆಯನ್ನು ಕೇಳದೆ ದುಷ್ಟತನ ಮಾಡುತ್ತಿರುವೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:16
29 ತಿಳಿವುಗಳ ಹೋಲಿಕೆ  

ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಗಳುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲರಾದ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ಸೈರಣೆಯಿಂದ ಸೈರಿಸಿಕೊಂಡಿದ್ದಾನೆ.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ತರುವಾಯ ಆತನು ದೇವಾಲಯಕ್ಕೆ ಬಂದು ಬೋಧಿಸುತ್ತಿರಲಾಗಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಆತನ ಬಳಿಗೆ ಬಂದು - ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಯಾರು ಕೊಟ್ಟರು ಎಂದು ಕೇಳಲು


ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇವಿುಸಿ ಯಾವಯಾವನು ಮೈದುಂಬಿ ಪ್ರವಾದಿಯಾಗಿ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;


ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.


ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -


ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಆಗ ಯೆಹೋವನು ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ ಅವನಿಗೆ - ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಭಕ್ತಿಯನ್ನೇಕೆ ಇಟ್ಟಿದ್ದೀ ಎಂದು ಹೇಳಿಸಿದನು.


ಅನಂತರ ಯೆಹೂದದ ಅರಸನಾದ ಅಮಚ್ಯನು ಮಂತ್ರಾಲೋಚನೆ ಕೇಳಿ ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಯೋವಾಷನಿಗೆ - ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಎಂದು ದೂತರ ಮುಖಾಂತರವಾಗಿ ಹೇಳಿಸಿದನು.


ಯೆಹೋವನು ಇಂತೆನ್ನುತ್ತಾನೆ - ನಾನು ಅವರನ್ನು ಕಳುಹಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾರೆ; ನೀವೂ ನಿಮಗೆ ಪ್ರವಾದಿಸುವ ಪ್ರವಾದಿಗಳೂ ನನ್ನಿಂದ ಅಟ್ಟಲ್ಪಟ್ಟು ಅಳಿದುಹೋಗುವದಕ್ಕೆ ಅವರ ದುರ್ಬೋಧನೆಯು ಆಸ್ಪದವಾಗುವದು.


ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ ಸಮಸ್ತ ಸೇನಾಪತಿಗಳೂ ಸಕಲಜನರೂ ಕೇಳದೆ ಹೋದರು.


ಕೊಂಬಿನ ಕೂಗನ್ನು ಕೇಳಿದ ಯಾವನೇ ಆಗಲಿ ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ ತನ್ನ ಮರಣಕ್ಕೆ ತಾನೇ ಕಾರಣ.


ಅವನು ಮೋಶೆಗೆ - ನನ್ನ ಬಳಿಯಿಂದ ಹೋಗು; ಇನ್ನು ಮುಂದೆ ನನ್ನ ಮುಖದೆದುರಿಗೆ ಬರಲೇ ಕೂಡದು; ಎಚ್ಚರ; ತಿರಿಗಿ ಸನ್ನಿಧಿಗೆ ಬಂದರೆ ಮರಣದಂಡನೆ ಆಗುವದು ಎಂದು ಹೇಳಿದನು.


ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.


ಯಾಕಂದರೆ ಯೆಹೋವನ ಭಯಭಕ್ತಿಗೆ ಮನಸ್ಸಿಲ್ಲದೆ ತಿಳುವಳಿಕೆಯನ್ನು ಹಗೆಮಾಡಿದರು.


ನನ್ನ ಆಲೋಚನೆಯನ್ನು ಕೇಳಲೊಲ್ಲದೆ ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು