Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:18 - ಕನ್ನಡ ಸತ್ಯವೇದವು J.V. (BSI)

18 ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ - ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರುಮರಕ್ಕೆ - ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದುಹೋಗುತ್ತಿರುವಾಗ ಅದನ್ನು ತುಳಿದು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಇಸ್ರಯೇಲರ ಅರಸ ಯೋವಾಷನು ಯೆಹೂದ್ಯರ ಅರಸ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡ ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ, ಲೆಬನೋನಿನ ಒಂದು ಕಾಡುಮೃಗ ಆ ಮಾರ್ಗವಾಗಿ ಹಾದುಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋವಾಷನು ಇಸ್ರೇಲಿನ ಅರಸನಾಗಿದ್ದನು. ಅವನು, “ಲೆಬನೋನಿನ ಒಂದು ಚಿಕ್ಕ ಮುಳ್ಳುಗಿಡವು ಲೆಬನೋನಿನ ದೇವದಾರು ಮರಕ್ಕೆ ಸಂದೇಶವನ್ನು ಕಳುಹಿಸಿತು. ಮುಳ್ಳುಗಿಡವು ಹೀಗೆ ಹೇಳಿತು: ‘ನಿನ್ನ ಮಗಳು ನನ್ನ ಮಗನನ್ನು ಮದುವೆ ಮಾಡಿಕೊಳ್ಳಲಿ.’ ಆದರೆ ಒಂದು ಕಾಡುಮೃಗ ಬಂದು ಮುಳ್ಳುಗಿಡವನ್ನು ತುಳಿದು ನಾಶಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:18
4 ತಿಳಿವುಗಳ ಹೋಲಿಕೆ  

ಕಾಡುಹಂದಿಯು ಅದನ್ನು ನಿರ್ಮೂಲಮಾಡುತ್ತದೆ; ಅರಣ್ಯಮೃಗಗಳು ಅದನ್ನು ತಿಂದುಹಾಕುತ್ತವೆ.


ಅವನು ಲೆಬನೋನಿನ ದೇವದಾರುವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ ಎಲ್ಲಾ ಪಶುಪಕ್ಷಿಜಲಜಂತು ಕ್ರಿವಿುಕೀಟಗಳನ್ನೂ ಕುರಿತು ಪ್ರಸ್ತಾಪಿಸಿದನು.


ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು