Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:19 - ಕನ್ನಡ ಸತ್ಯವೇದವು J.V. (BSI)

19 ಅಹಹ, ಎದೋಮ್ಯರನ್ನು ಸೋಲಿಸಿ ಬಹುಕೀರ್ತಿಯನ್ನು ಪಡಕೊಂಡೆನಲ್ಲಾ ಎಂದು ನೀನು ಹೆಮ್ಮೆಗೊಂಡಿದ್ದೀ; ಸುಮ್ಮನೆ ಮನೆಯಲ್ಲಿ ಕೂತುಕೊಳ್ಳಬಾರದೇ; ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಯಾಕೆ ಕೇಡನ್ನು ತಂದುಕೊಳ್ಳುತ್ತೀ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಹಹ! ಎದೋಮ್ಯರನ್ನು ಸೋಲಿಸಿ ಬಹಳ ಕೀರ್ತಿಯನ್ನು ಪಡಕೊಂಡೆ, ಎಂದು ನೀನು ಹೆಮ್ಮೆಪಡುತಿರುವೆ; ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೇ? ನನ್ನನ್ನು ಕೆಣಕಿ ನಿನಗೂ ನಿನ್ನ ಯೆಹೂದ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀನು ನಿನ್ನ ಮನಸ್ಸಿನಲ್ಲಿ, ‘ನಾನು ಎದೋಮನನ್ನು ಸೋಲಿಸಿದ್ದೇನೆ’ ಎಂದು ನೆನಸಿಕೊಂಡಿರಬಹುದು. ನೀನು ತುಂಬಾ ಹೆಮ್ಮೆಯುಳ್ಳವನಾಗಿ ಜಂಬ ಕೊಚ್ಚಿಕೊಳ್ಳುತ್ತಿರುವೆ. ಆದರೆ ನೀನು ಮನೆಯಲ್ಲಿಯೇ ಕುಳಿತುಕೊಳ್ಳುವುದು ಒಳ್ಳೆದು. ಸುಮ್ಮನೆ ತೊಂದರೆಗೆ ಸಿಕ್ಕಿಕೊಳ್ಳಬೇಡ. ನನ್ನೊಂದಿಗೆ ಯುದ್ಧ ಮಾಡಿದರೆ ಇಡೀ ಯೆಹೂದ ದೇಶವೇ ನಾಶವಾಗುವದು.” ಎಂದು ಬರೆದು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:19
19 ತಿಳಿವುಗಳ ಹೋಲಿಕೆ  

ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದದರಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರದಿಂದ ಸೊಂಟಾಕಟ್ಟಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿರಿ. ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕೂತುಕೊಂಡು ಆಲೋಚಿಸುವದಿಲ್ಲವೇ?


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಯೆಹೋವನು ಹೀಗನ್ನುತ್ತಾನೆ - ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರವಿುಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ;


ಆಸೆಬಡುಕನು ಜಗಳವನ್ನೆಬ್ಬಿಸುವನು; ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.


ಒಬ್ಬನು ದಾರಿಯಲ್ಲಿ ಹೋಗುತ್ತಾ ಪರರ ವ್ಯಾಜ್ಯಕ್ಕೆ ಸೇರಿ ರೇಗಿಕೊಳ್ಳುವದು ನಾಯಿಯನ್ನು ಕಿವಿಹಿಡಿದ ಹಾಗೆ.


ವ್ಯಾಜ್ಯಕ್ಕೆ ದೂರನು ಮಾನಕ್ಕೆ ಯೋಗ್ಯನು; ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.


ಜ್ಞಾನಹೀನನ ತುಟಿಗಳು ಜಗಳವನ್ನು ಹೂಡುತ್ತವೆ; ಅವನ ಬಾಯಿ ಪೆಟ್ಟುತಿನ್ನುವದಕ್ಕೆ ಕೂಗಿಕೊಳ್ಳುತ್ತದೆ.


ಗರ್ವದಿಂದ ಭಂಗ; ಉಬ್ಬಿನಿಂದ ದೊಬ್ಬು.


ಹೆಮ್ಮೆಯ ಫಲವು ಕಲಹವೇ; ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.


ಯೋಷೀಯನು ಅವನಿಗೆ ವಿರೋಧವಾಗಿ ಹೊರಡಲು ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ - ಯೆಹೂದದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ. ನನ್ನನ್ನು ಮುಂದರಿಸಬೇಕೆಂದು ದೇವರ ಅಪ್ಪಣೆಯಾಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ಕೈಯೆತ್ತುವದನ್ನು ಬಿಡು. ಇಲ್ಲವಾದರೆ ಆತನು ನಿನ್ನನ್ನು ನಾಶಮಾಡುವನು ಎಂದು ಹೇಳಿಸಿದನು.


ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.


ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂಬದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನಮಾಡಬೇಕೆಂದು ಆತನು ನಿರ್ಣಯಿಸಿದ್ದನು.


ಅದರಿಂದ ಅವನ ಮನಸ್ಸು ಉಬ್ಬಿಕೊಳ್ಳುವದು; ಅವನು ಲಕ್ಷಾಂತರ ಸೈನಿಕರನ್ನು ಬೀಳಿಸಿದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು