Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:20 - ಕನ್ನಡ ಸತ್ಯವೇದವು J.V. (BSI)

20 ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂಬದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನಮಾಡಬೇಕೆಂದು ಆತನು ನಿರ್ಣಯಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಅದು ದೇವರ ಸಂಕಲ್ಪದಿಂದಲೇ ಆಯಿತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಅಪಜಯ ಮಾಡಬೇಕೆಂದು ಯೆಹೋವನು ನಿರ್ಣಯಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರೂ ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನ ಮಾಡಬೇಕೆಂದು ದೇವರು ನಿರ್ಣಯಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಮಚ್ಯನು ಅವನ ಮಾತಿಗೆ ಲಕ್ಷ್ಯಕೊಡಲಿಲ್ಲ. ಇದು ದೇವರಿಂದಲೇ ಆಯಿತು. ಇಸ್ರೇಲ್ ಯೆಹೂದವನ್ನು ಸೋಲಿಸಬೇಕೆಂದು ದೇವರ ಇಚ್ಛೆಯಾಗಿತ್ತು. ಯಾಕೆಂದರೆ ಯೆಹೂದದ ಜನರು ಎದೋಮ್ಯರ ದೇವರುಗಳನ್ನು ಆರಾಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:20
10 ತಿಳಿವುಗಳ ಹೋಲಿಕೆ  

ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಯೋಗದಿಂದಲೇ. ಅವನು ಅಲ್ಲಿ ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗನಾದ ಯೇಹುವನ್ನು ಎದುರುಗೊಳ್ಳುವದಕ್ಕೆ ಹೋದನು. ಯೆಹೋವನು ಅಹಾಬನ ಮನೆಯನ್ನು ನಿರ್ನಾಮಮಾಡುವದಕ್ಕೋಸ್ಕರ ಯೇಹುವಿಗೆ ರಾಜ್ಯಾಭಿಷೇಕ ಮಾಡಿಸಿದ್ದನು.


ಅವನು ಜನರ ಮಾತನ್ನು ಕೇಳದೆಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಅಹಹ, ಎದೋಮ್ಯರನ್ನು ಸೋಲಿಸಿ ಬಹುಕೀರ್ತಿಯನ್ನು ಪಡಕೊಂಡೆನಲ್ಲಾ ಎಂದು ನೀನು ಹೆಮ್ಮೆಗೊಂಡಿದ್ದೀ; ಸುಮ್ಮನೆ ಮನೆಯಲ್ಲಿ ಕೂತುಕೊಳ್ಳಬಾರದೇ; ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಯಾಕೆ ಕೇಡನ್ನು ತಂದುಕೊಳ್ಳುತ್ತೀ ಎಂದು ಉತ್ತರಕೊಟ್ಟನು.


ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು