Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 25:21 - ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲ್ಯರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲರ ಅರಸ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಜುದೇಯದ ಅರಸ ಅಮಚ್ಯನೂ ಜುದೇಯ ಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೀಗೆ ಯೆಹೂದದ ಅರಸನಾದ ಅಮಚ್ಯನು ಇಸ್ರೇಲರ ಅರಸನನ್ನು ಮುಖಾಮುಖಿಯಾಗಿ ಬೇತ್ಷೆಮೆಷಿನಲ್ಲಿ ಸಂಧಿಸಿದನು. ಬೇತ್ಷೆಮೆಷ್ ಯೆಹೂದ ರಾಜ್ಯದ ಪಟ್ಟಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 25:21
7 ತಿಳಿವುಗಳ ಹೋಲಿಕೆ  

ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು.


ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಅನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‍ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂಬದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರು ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನಮಾಡಬೇಕೆಂದು ಆತನು ನಿರ್ಣಯಿಸಿದ್ದನು.


ಯೆಹೂದ್ಯರು ಇಸ್ರಾಯೇಲ್ಯರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.


ಇವನ ಉಳಿದ ಚರಿತ್ರೆಯೂ ಎಲ್ಲಾ ಶೂರ ಕೃತ್ಯಗಳೂ ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡಿಸಿದ ಯುದ್ಧದ ವಿವರವೂ ಇಸ್ರಾಯೇಲ್‍ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು