8 ನೀನೇ ಹೋಗಿ ಆ ಕಾರ್ಯವನ್ನು ನಿರ್ವಹಿಸು; ಧೈರ್ಯದಿಂದ ಯುದ್ಧಮಾಡು. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನೀನು ಅಪಜಯಹೊಂದುವಂತೆ ಮಾಡುವನು, ಜಯಾ, ಅಪಜಯಗಳನ್ನು ಉಂಟುಮಾಡುವುದಕ್ಕೆ ಆತನು ಶಕ್ತನಾಗಿರುತ್ತಾನಲ್ಲವೆ?” ಎಂದನು.
8 ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.
8 ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.
ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು
ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.
ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.
ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶರಾಗುವರು ಎಂದು ಹೇಳಿದನು.
ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು.
ಆಗ ಯೆಹೋವನು ಗಿದ್ಯೋನನಿಗೆ - ನೀರನ್ನು ನೆಕ್ಕಿದ ಆ ಮುನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ವಿುದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಎಂದು ಆಜ್ಞಾಪಿಸಿದನು.
ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.