Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:13 - ಕನ್ನಡ ಸತ್ಯವೇದವು J.V. (BSI)

13 ಇವರ ಕೈಕೆಳಗಿರುವ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರೋಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವರ ಕೈಕೆಳಗಿದ್ದ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರುದ್ಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವರ ಕೈಕೆಳಗಿದ್ದ ಯೋಧರ ಸಂಖ್ಯೆ, ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು, ಅವನ ವೈರಿಗಳಿಗೆ ವಿರುದ್ಧ, ಪರಾಕ್ರಮದಿಂದ ಯುದ್ಧ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:13
9 ತಿಳಿವುಗಳ ಹೋಲಿಕೆ  

ಆಮೇಲೆ ಅಮಚ್ಯನು ಯೆಹೂದ್ಯರನ್ನು ಕೂಡಿಸಿ ಸಹಸ್ರಾಧಿಪತಿ ಶತಾಧಿಪತಿಗಳ ಕೈಕೆಳಗೆ ಕೊಟ್ಟು ಯೆಹೂದ ಬೆನ್ಯಾಮೀನ್ ಕುಲಗಳಲ್ಲಿನ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ ಇಪ್ಪತ್ತು ವರುಷದವರು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಮಾಡಲು ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯರೂ ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆಗಿರುವ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರೂ ರಣವೀರರು.


ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.


ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದ ನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನ್ನ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ರಣವೀರರಾಗಿರುವ ಎಲ್ಲಾ ಗೋತ್ರಪ್ರಧಾನರ ಸಂಖ್ಯೆಯು ಎರಡು ಸಾವಿರದ ಆರು ನೂರು.


ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೋಸ್ಕರ ಬೇಕಾದ ಗುರಾಣಿ ಬರ್ಜಿ ಶಿರಸ್ತ್ರಾಣ ಕವಚ ಬಿಲ್ಲು ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.


ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು