Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:14 - ಕನ್ನಡ ಸತ್ಯವೇದವು J.V. (BSI)

14 ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೋಸ್ಕರ ಬೇಕಾದ ಗುರಾಣಿ ಬರ್ಜಿ ಶಿರಸ್ತ್ರಾಣ ಕವಚ ಬಿಲ್ಲು ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:14
6 ತಿಳಿವುಗಳ ಹೋಲಿಕೆ  

ಕೈಯನ್ನು ಚೀಲದಲ್ಲಿ ಹಾಕಿ ಒಂದು ಕಲ್ಲನ್ನು ತೆಗೆದು ಅವನ ಹಣೆಗೆ ಗುರಿಯಿಟ್ಟು ಕವಣೆಯನ್ನು ಬೀಸಿ ಹೊಡೆಯಲು ಕಲ್ಲು ಅವನ ಹಣೆಯೊಳಗೆ ಹೊಕ್ಕಿತು; ಅವನು ಬೋರಲಬಿದ್ದನು.


ಈ ಎಲ್ಲಾ ಜನರಲ್ಲಿ ಏಳು ನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನೂ ಕೂದಲೆಳೆಯಷ್ಟೂ ಗುರಿ ತಪ್ಪದ ಹಾಗೆ ಕವಣೆಯನ್ನು ಹೊಡಿಯುವದರಲ್ಲಿ ನಿಪುಣನು;


ಇವರ ಕೈಕೆಳಗಿರುವ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರೋಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.


ಇದಲ್ಲದೆ ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವದಕ್ಕಾಗಿ ಜಾಣರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ ಅವುಗಳನ್ನು ಯೆರೂಸಲೇವಿುನಲ್ಲಿ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದನು. ಅವನು ಬಲಿಷ್ಠನಾಗುವವರೆಗೂ ದೇವರ ಆಶ್ಚರ್ಯವಾದ ಸಹಾಯವನ್ನು ಹೊಂದಿದನು; ಅವನ ಕೀರ್ತಿಯು ದೂರದವರೆಗೆ ಹಬ್ಬಿತು.


ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಬರ್ಜಿಗಳನ್ನು ಬೆಳಗಿರಿ, ಕವಚ ತೊಟ್ಟುಕೊಳ್ಳಿರಿ.


ತಲೆದೂರಿಸುವದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು