Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:15 - ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವದಕ್ಕಾಗಿ ಜಾಣರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ ಅವುಗಳನ್ನು ಯೆರೂಸಲೇವಿುನಲ್ಲಿ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದನು. ಅವನು ಬಲಿಷ್ಠನಾಗುವವರೆಗೂ ದೇವರ ಆಶ್ಚರ್ಯವಾದ ಸಹಾಯವನ್ನು ಹೊಂದಿದನು; ಅವನ ಕೀರ್ತಿಯು ದೂರದವರೆಗೆ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:15
9 ತಿಳಿವುಗಳ ಹೋಲಿಕೆ  

ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಅವನು ದಾನ್‍ಕುಲದ ಸ್ತ್ರೀಯ ಮಗನು; ಅವನ ತಂದೆ ತೂರಿನವನು. ಅವನು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಕಲ್ಲು ಮರ ಇವುಗಳ ಕೆಲಸವನ್ನು ಮಾಡುವದಕ್ಕೂ ಧೂಮ್ರ ನೀಲರಕ್ತವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವದಕ್ಕೂ ಸಮರ್ಥನು. ನೀನೂ ನಿನ್ನ ತಂದೆಯಾದ ದಾವೀದನೂ ಗೊತ್ತುಮಾಡಿದ ಜಾಣರೊಡನೆ ಅವನು ಕೆಲಸಮಾಡಲಿ.


ಹೀಗಿರಲು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಇವುಗಳ ಕೆಲಸಮಾಡುವದರಲ್ಲಿಯೂ ಧೂಮ್ರ ರಕ್ತ ನೀಲವರ್ಣಗಳ ಬಟ್ಟೆಯನ್ನು ನೇಯುವದರಲ್ಲಿಯೂ ಚಿತ್ರ ಕೆತ್ತುವದರಲ್ಲಿಯೂ ಜಾಣನಾದ ಮನುಷ್ಯನನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯು ಗೊತ್ತು ಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇರುವಂಥ ಜಾಣರೊಂದಿಗೆ ಅವನು ಕೆಲಸಮಾಡಲಿ.


ಇವೇ ಮೊದಲಾದ ಸಮಸ್ತ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ನಾನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತುಮಾಡಿದ್ದೇನೆ.


ಉಜ್ಜೀಯನು ಈ ಎಲ್ಲಾ ಸೈನ್ಯದವರಿಗೋಸ್ಕರ ಬೇಕಾದ ಗುರಾಣಿ ಬರ್ಜಿ ಶಿರಸ್ತ್ರಾಣ ಕವಚ ಬಿಲ್ಲು ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ಜನಾಂಗಗಳ ಮಧ್ಯೆ ನಡೆಯುವದನ್ನು ನೋಡಿರಿ, ದೃಷ್ಟಿಯಿಡಿರಿ, ಬೆರಗಾಗಿರಿ; ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು, ಅದು ನಿಮಗೆ ತಿಳಿಯಲ್ಪಟ್ಟರೂ ನೀವು ಅದನ್ನು ನಂಬುವದಿಲ್ಲ.


ತಿನ್ನತಕ್ಕ ಹಣ್ಣು ಕೊಡುವದಿಲ್ಲವೆಂದು ನೀವು ತಿಳಿದ ಮರಗಳನ್ನು ಮಾತ್ರ ನೀವು ಕೆಡಿಸಬಹುದು, ಕಡಿಯಬಹುದು. ಅವುಗಳಿಂದ ಯುದ್ಧಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು