Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:21 - ಕನ್ನಡ ಸತ್ಯವೇದವು J.V. (BSI)

21 ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೋಗಿಯಾಗಿದ್ದು ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜ ಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉಜ್ಜೀಯನು ಜೀವದಿಂದಿರುವ ವರೆಗೂ ಕುಷ್ಠರೋಗಿಯಾಗಿದ್ದು, ಯೆಹೋವನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಅವನು ಕುಷ್ಠದ ದೆಸೆಯಿಂದ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾದಿಪತ್ಯವನ್ನೂ ಮತ್ತು ಪ್ರಜಾಪಾಲನೆಯನ್ನೂ ಅವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾಮನು ಪ್ರಜಾಪಾಲನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:21
9 ತಿಳಿವುಗಳ ಹೋಲಿಕೆ  

ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ಊರುಬಾಗಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ - ನಾವು ಸಾಯುವ ತನಕ ಇಲ್ಲೇ ಕೂತಿರಬೇಕೋ?


ಆದಕಾರಣ ವಿುರ್ಯಾಮಳು ಏಳು ದಿನದವರೆಗೆ ಪಾಳೆಯದ ಹೊರಗೆ ಇರಬೇಕಾಯಿತು. ಆಕೆಯು ತಿರಿಗಿ ಸೇರಿಕೊಳ್ಳುವ ಪರ್ಯಂತರ ಇಸ್ರಾಯೇಲ್ಯರು ಪ್ರಯಾಣಮಾಡಲಿಲ್ಲ.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದಕಾರಣ ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿದದರಿಂದ ಅವನೂ ಶೀಘ್ರವಾಗಿ ಹೊರಗೆ ಹೋದನು.


ನಾನೇ ಅವರ ಪಾಳೆಯದಲ್ಲಿ ವಾಸವಾಗಿರುವದರಿಂದ ಅವರು ಅದನ್ನು ಅಪವಿತ್ರಮಾಡಬಾರದು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು; ಅಂಥವರೆಲ್ಲರನ್ನೂ ಪಾಳೆಯದಿಂದ ಹೊರಡಿಸಿದರು.


ಯೋತಾಮನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರುಷದವನಾಗಿದ್ದನು. ಅವನು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆಯು ಇವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು