Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:6 - ಕನ್ನಡ ಸತ್ಯವೇದವು J.V. (BSI)

6 ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:6
12 ತಿಳಿವುಗಳ ಹೋಲಿಕೆ  

ಎಲೈ, ಎಲ್ಲಾ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದುಹೋಯಿತೆಂದು ಉಲ್ಲಾಸಗೊಳ್ಳದಿರಿ; ಹಾವಿನ ಬೀಜದಿಂದ ಮಹಾ ನಾಗವುಂಟಾಗುವದು, ಆ ಬೀಜದ ಸಂತತಿಯು ಹಾರುವ ಅಗ್ನಿಮಯಸರ್ಪವೇ.


ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಎಬ್ಬಿಸಿದ್ದರಿಂದ


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರಿಂದ ಗತ್ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ತೆಗೆದುಕೊಂಡನು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.


ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.


ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ


ನಾನು ಅಷ್ಡೋದಿನೊಳಗಿಂದ ಸಿಂಹಾಸನಾಸೀನನನ್ನೂ ಅಷ್ಕೆಲೋನಿನೊಳಗಿಂದ ರಾಜದಂಡಧಾರಿಯನ್ನೂ ನಿರ್ಮೂಲ ಮಾಡಿ ಎಕ್ರೋನಿನ ಮೇಲೆ ಕೈಯೆತ್ತುವೆನು; ಉಳಿದ ಫಿಲಿಷ್ಟಿಯರೆಲ್ಲರೂ ನಾಶವಾಗಿ ಹೋಗುವರು; ಇದು ಕರ್ತನಾದ ಯೆಹೋವನ ನುಡಿ.


ಕಲ್ನೆಗೆ ಹೋಗಿ ನೋಡಿರಿ, ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ, ಆಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ; ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತವು ನಿಮ್ಮ ಪ್ರಾಂತಕ್ಕಿಂತ ದೊಡ್ಡದೋ?


ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.


ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;


ಅಶ್ಶೂರದ ರಾಜನಾದ ಸರ್ಗೋನನು ಕಳುಹಿಸಿದ ದಳವಾಯಿಯು ಅಷ್ಡೋದಿಗೆ ಬಂದು ಅದನ್ನು ಮುತ್ತಿಹಿಡಿದ ವರುಷದಲ್ಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು