Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:8 - ಕನ್ನಡ ಸತ್ಯವೇದವು J.V. (BSI)

8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುವವರಾದರು. ಅವನು ಅಧಿಕಬಲವುಳ್ಳವನಾದದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕಬಲವುಳ್ಳವನ್ನಾದುದರಿಂದ ಅವನ ಹೆಸರು ಐಗುಪ್ತದ ಮೇರೆಯವರೆಗೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:8
14 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಗಳಲ್ಲಿ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ಕೊಡುತ್ತಿದ್ದರು.


ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ ಅವರನ್ನು ನೆಲಕ್ಕೆ ಹಾಕಿಸಿ ಹಗ್ಗದಿಂದ ಅಳತೆ ಮಾಡಿಸಿ ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲು ಉಳಿಸಿದನು. ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಕಿರೀ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ ಬೆನವ್ಮಿು ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲ ಪುರುಷನು.


ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರೋಧವಾಗಿ ಯುದ್ಧಕ್ಕೆ ಬಂದರು.


ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಪ್ರಸಿದ್ಧವಾಯಿತು.


ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಹೊಡೆದು ಬಂದು ಅಂದಿನಿಂದ ಬಹುಖ್ಯಾತಿವಂತನಾದನು.


ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.


ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಎಷ್ಟು ಭಾಗವನ್ನಾದರೂ ಕೊಡುವದಿಲ್ಲ.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಅವನು ಯೆರೂಸಲೇವಿುನಲ್ಲಿ ಮೂಲೆಬಾಗಲು, ತಗ್ಗಿನ ಬಾಗಲು, ಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.


ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರುವಂತೆ ಮಾಡಿದನು.


ಮತ್ತು ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರನ್ನು ಜಯಿಸಿದನು; ಅಮ್ಮೋನಿಯರು ಆ ವರುಷದಲ್ಲಿ ಇವನಿಗೆ ನೂರು ತಲಾಂತು ಬೆಳ್ಳಿ, ಹತ್ತುಸಾವಿರ ಕೋರ್ ಗೋದಿ, ಹತ್ತು ಸಾವಿರ ಕೋರ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರುಷಗಳಲ್ಲಿಯೂ ಹೀಗೆಯೇ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು