Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 26:9 - ಕನ್ನಡ ಸತ್ಯವೇದವು J.V. (BSI)

9 ಅವನು ಯೆರೂಸಲೇವಿುನಲ್ಲಿ ಮೂಲೆಬಾಗಲು, ತಗ್ಗಿನ ಬಾಗಲು, ಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗಗಳ ಮೇಲೆ ಗೋಪುರಗಳನ್ನು ಕಟ್ಟಿಸಿ ಭದ್ರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆ ಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗ, ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿ ಭದ್ರಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 26:9
10 ತಿಳಿವುಗಳ ಹೋಲಿಕೆ  

ತಗ್ಗಿನ ಬಾಗಲನ್ನು ಜೀರ್ಣೋದ್ಧಾರಮಾಡಿದವರು ಹಾನೂನನೂ ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆಬಾಗಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.


ಇಸ್ರಾಯೇಲ್ಯರ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡು ಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಬಿಟ್ಟನು.


ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇವಿುಗೆ ಕರಕೊಂಡುಬಂದು ಎಫ್ರಾಯೀಮ್ ಬಾಗಲಿಗೂ ಮೂಲೆಯ ಬಾಗಲಿಗೂ ಮಧ್ಯದಲ್ಲಿದ್ದ ಯೆರೂಸಲೇವಿುನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.


ಆಗ ದೇಶವು ಗೆಬದಿಂದ ಯೆರೂಸಲೇವಿುಗೆ ತೆಂಕಲಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತ ಇದ್ದ ಕಡೆಯೇ ಎತ್ತರದಲ್ಲಿ ನಿಂತಿರುವದು.


ಯೆಹೋವನು ಇಂತೆನ್ನುತ್ತಾನೆ - ಇಗೋ, ಮುಂದಿನ ಕಾಲದಲ್ಲಿ ಈ ಪಟ್ಟಣವು ಹನನೇಲನ ಬುರುಜಿನಿಂದ ಮೂಲೆಯ ಬಾಗಿಲಿನವರೆಗೆ ಯೆಹೋವನ ಘನತೆಗಾಗಿ ವಿಸ್ತರಿಸುವದು.


ಈ ಮೂಲೆಯುಪ್ಪರಿಗೆಗೂ ಕುರಿಬಾಗಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರಮಾಡಿದವರು ಅಕ್ಕಸಾಲಿಗರು, ವರ್ತಕರು ಇವರೇ.


ಇವನ ಆಚೆ ಅಜರ್ಯನ ಮನೆಯಿಂದ ಮೂಲೆಯವರೆಗೆ ಇರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.


ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ತಗ್ಗಿನ ಬಾಗಲಿನಿಂದ ಮನೆಗೆ ಬಂದೆನು.


ನಾನು ರಾತ್ರಿವೇಳೆಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಹಾಳುಬಿದ್ದ ಯೆರೂಸಲೇವಿುನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಲಿಗೆ ಹೋದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು