Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:1 - ಕನ್ನಡ ಸತ್ಯವೇದವು J.V. (BSI)

1 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಅವನು ಹದಿನಾರು ವರ್ಷ ಆಳಿದನು. ಸರ್ವೇಶ್ವರನ ಚಿತ್ತಾನುಸಾರ ಅವನು ನಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿದ್ದು ಹದಿನಾರು ವರ್ಷ ರಾಜ್ಯಭಾರ ಮಾಡಿದನು. ಆಹಾಜನು ತನ್ನ ಪೂರ್ವಿಕನಾದ ದಾವೀದನಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ದೇವರ ಚಿತ್ತದ ಪ್ರಕಾರ ಜೀವಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:1
12 ತಿಳಿವುಗಳ ಹೋಲಿಕೆ  

ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇವಿುನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.


ಇವನ ಮಗನು ಆಹಾಜ್; ಇವನ ಮಗನು ಹಿಜ್ಕೀಯ;


ಉಜ್ಜೀಯನು ಯೋತಾಮನನ್ನು ಪಡೆದನು. ಯೋತಾಮನು ಆಹಾಜನನ್ನು ಪಡೆದನು. ಆಹಾಜನು ಹಿಜ್ಕೀಯನನ್ನು ಪಡೆದನು.


ಯೆಹೂದದ ಅರಸನಾದ ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇವಿುನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕಂಡುಬಂದ ಯೆಹೋವನ ವಾಕ್ಯ.


ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.


ಇವನು ಬಾಳ್‍ದೇವರುಗಳನ್ನು ಅವಲಂಬಿಸದೆ ತನ್ನ ಪೂರ್ವಿಕನಾದ ದಾವೀದನ ಮೊದಲಿನ ನಡತೆಯ ಪ್ರಕಾರ ನಡೆಯುತ್ತಿದ್ದದರಿಂದ ಯೆಹೋವನು ಇವನ ಸಂಗಡ ಇದ್ದನು.


ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು; ಆದರೆ [ಅವನಂತೆ] ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಹಾಜನು ಅರಸನಾದನು.


ಅವನು ಎಲ್ಲಾ ವಿಷಯಗಳಲ್ಲಿಯೂ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು.


ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್‍ರಾಜನಾದ ಆಹಾಜನ ನಿವಿುತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು