Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:13 - ಕನ್ನಡ ಸತ್ಯವೇದವು J.V. (BSI)

13 ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪಾಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲ್ಯರ ಮೇಲಿರುವ ದೇವಕೋಪವು ಉಗ್ರವಾಗಿದೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರಿಗೆ, “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿರಿ; ನೀವು ನಮ್ಮ ಪಾಪ ಅಪರಾಧಗಳ ಜೊತೆಯಲ್ಲಿ ಯೆಹೋವನಿಗೆ ವಿರುದ್ಧವಾದ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುವಿರಾ? ನಮ್ಮ ಅಪರಾಧವು ದೊಡ್ಡದು; ಇಸ್ರಾಯೇಲರ ಮೇಲಿರುವ ದೈವಕೋಪವು ಉಗ್ರವಾಗಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿ; ನೀವು ನಮ್ಮ ಪಾಪಾಪರಾಧಗಳ ಜೊತೆಗೆ ಸರ್ವೇಶ್ವರನಿಗೆ ವಿರುದ್ಧ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರೋ? ನಮ್ಮ ಅಪರಾಧ ದೊಡ್ಡದು; ಇಸ್ರಯೇಲರ ಮೇಲಿರುವ ದೈವಕೋಪ ಉಗ್ರವಾಗಿದೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ನಾಯಕರುಗಳು ಇಸ್ರೇಲರ ಸೈನಿಕರಿಗೆ, “ಯೆಹೂದದೇಶದಿಂದ ಸೆರೆಯವರನ್ನು ಇಲ್ಲಿಗೆ ತರಬೇಡಿ. ನೀವು ಹಾಗೆ ಮಾಡಿದರೆ ಅದು ನಿಮ್ಮ ಪಾಪವನ್ನೂ ದೋಷವನ್ನೂ ಮತ್ತಷ್ಟು ಹೆಚ್ಚಿಸುತ್ತದೆ. ಯೆಹೋವನು ಇಸ್ರೇಲರ ಮೇಲೆ ತುಂಬಾ ಸಿಟ್ಟುಗೊಳ್ಳುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:13
9 ತಿಳಿವುಗಳ ಹೋಲಿಕೆ  

ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದುಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂವಿುಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತದಿಂದುಂಟಾಗುವ ಅಪರಾಧವು ನಿಮ್ಮ ತಲೆಯ ಮೇಲೆ ಬರುವದು.


ಒಳ್ಳೇದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡಿರಿ.


ಈಗ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲ್ಯರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಲ್ಲಾ.


ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬವರು ಯುದ್ಧದಿಂದ ಬರುವವರ ಮುಂದೆ ನಿಂತು ಅವರಿಗೆ -


ಭಟರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟು ಬಿಟ್ಟರು.


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು