Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:15 - ಕನ್ನಡ ಸತ್ಯವೇದವು J.V. (BSI)

15 ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವದಕ್ಕೆ ಬಟ್ಟೆಗಳನ್ನೂ ಕಾಲಿಗೆ ಕೆರಗಳನ್ನೂ ಕೊಟ್ಟು ಅನ್ನಪಾನಗಳನ್ನಿತ್ತು ತೈಲಹಚ್ಚಿ ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರಕೊಂಡುಹೋಗಿ ಅವರ ಬಂಧುಗಳ ಹತ್ತಿರ ಬಿಟ್ಟು ಸಮಾರ್ಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:15
21 ತಿಳಿವುಗಳ ಹೋಲಿಕೆ  

ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ -


ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವಿಯೋ? ಇವರಿಗೆ ಅನ್ನಪಾನಗಳನ್ನು ಕೊಡು; ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ ಎಂದು ಉತ್ತರಕೊಟ್ಟನು.


ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.


ಕೇಳುವವರಾದ ನಿಮಗೆ ನಾನು ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ;


ಹಸಿದವರಿಗೆ ಅನ್ನವನ್ನು ಹಂಚುವದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವದು, ನಿನ್ನಂತೆ ನರನಾಗಿರುವ ಯಾವನಿಗೇ ಆಗಲಿ ಮುಖ ತಪ್ಪಿಸಿಕೊಳ್ಳದಿರುವದು, ಇವುಗಳೇ ನನಗೆ ಇಷ್ಟವಾದ ಉಪವಾಸವ್ರತವಲ್ಲವೇ.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.


ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು.


ಆತನು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಬಹುಕಾಲದಿಂದ ಬಟ್ಟೆಯನ್ನೇ ಹಾಕಿಕೊಳ್ಳದೆ ಯಾವ ಮನೆಯಲ್ಲಿಯೂ ಇರದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.


ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ, ಹದ್ಲೈಯನ ಮಗನಾದ ಅಮಾಸ ಎಂಬವರು ಯುದ್ಧದಿಂದ ಬರುವವರ ಮುಂದೆ ನಿಂತು ಅವರಿಗೆ -


ಭಟರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟು ಬಿಟ್ಟರು.


ಅವರು - ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವದಿಲ್ಲ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರಿಸಿ ಈ ಮಾತಿನಂತೆ ನಡೆಯುವದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.


ಆಗ ಅರಸನು ಅವರಿಗೋಸ್ಕರ ದೊಡ್ಡ ಔತಣವನ್ನು ಮಾಡಿಸಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಅರಾಮ್ಯರ ಗುಂಪುಗಳು ಇಸ್ರಾಯೇಲ್ಯರ ಪ್ರಾಂತದೊಳಗೆ ತಿರಿಗಿ ಬರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು