Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:19 - ಕನ್ನಡ ಸತ್ಯವೇದವು J.V. (BSI)

19 ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್‍ರಾಜನಾದ ಆಹಾಜನ ನಿವಿುತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೂದ್ಯರನ್ನು ಅಧರ್ಮಕ್ಕೆ ಪ್ರೇರೇಪಿಸಿ ಯೆಹೋವನಿಗೆ ದ್ರೋಹಮಾಡಿದ ಇಸ್ರಾಯೇಲ್ ರಾಜನಾದ ಆಹಾಜನ ನಿಮಿತ್ತವಾಗಿ ಯೆಹೋವನು ಯೆಹೂದ್ಯರನ್ನು ಈ ಪ್ರಕಾರವಾಗಿ ತಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:19
20 ತಿಳಿವುಗಳ ಹೋಲಿಕೆ  

ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರೂ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಕ್ಕಳು.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ ಅದು [ದೇವರ] ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವದು; ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ ದುಷ್ಟರನ್ನು ತಟ್ಟನೆ ಕೆಡವಿಬಿಡು.


ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.


ನಿಮ್ಮ ಮಧ್ಯದಲ್ಲಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ಜನರು ಅಂಕೆತಪ್ಪಿ ತಮ್ಮ ಇಷ್ಟಬಂದಂತೆ ಮಾಡುವದಕ್ಕೆ ಆರೋನನು ಅವರನ್ನು ಬಿಟ್ಟದ್ದರಿಂದ ಅವರ ವಿರೋಧಿಗಳು ಅಪಹಾಸ್ಯ ಮಾಡುವದಕ್ಕೆ ಆಸ್ಪದವಾಯಿತು.


ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು


ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು; ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.


ಅವನು ಅಪರಾಧಿಯಾದದರಿಂದ ಯೆಹೋವನ ಸನ್ನಿಧಿಯಲ್ಲಿ ಈ ಪ್ರಾಯಶ್ಚಿತ್ತಯಜ್ಞವನ್ನು ಮಾಡಬೇಕು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿವಿುತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲ್ಯರು ಮಾಡಿದ ಪಾಪಗಳ ನಿವಿುತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು ಎಂದು ಆಕೆಗೆ ಹೇಳಿದನು.


ಅದಕ್ಕೆ ಅವನು - ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.


ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಹದಿನಾರು ವರುಷ ಆಳಿದನು. ಅವನು ಯೆಹೋವನ ಚಿತ್ತಾನುಸಾರವಾಗಿ ನಡೆಯಲಿಲ್ಲ.


ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೂ ಎಲ್ಲಾ ಹಸುರು ಮರಗಳ ಕೆಳಗೂ ಯಜ್ಞಗಳನ್ನೂ ಧೂಪಗಳನ್ನೂ ಸಮರ್ಪಿಸಿದನು.


ಆದರೆ ಯೆಹೂದ್ಯರೂ ಯೆರೂಸಲೇವಿುನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲ್ಯರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು