Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:20 - ಕನ್ನಡ ಸತ್ಯವೇದವು J.V. (BSI)

20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಬಂದು ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನನ್ನು ಕುಗ್ಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಸ್ಸೀರಿಯದ ಅರಸ ತಿಲ್ಗತ್ಪಿಲ್ನೆಸರನು ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನು ತಲೆತಗ್ಗಿಸುವಂತೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಆಹಾಜನಿಗೆ ಸಹಾಯ ಕೊಡುವ ಬದಲು ಅವನಿಗೇ ಕಷ್ಟಕೊಡಲು ಯೆಹೂದಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:20
14 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಗಿಲ್ಯಾದ್, ಗಲಿಲಾಯ ಪ್ರಾಂತಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡುಹೋದನು.


ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;


ಆದದರಿಂದ ಅಶ್ಶೂರದ ಅರಸನಾದ ಪೂಲ್, ತಿಗ್ಲತ್ಪಿಲೆಸರ್ ಎಂಬವರು ಇಸ್ರಾಯೇಲ್ ದೇವರ ಪ್ರೇರಣೆಯಿಂದ ಬಂದು ರೂಬೇನ್ಯರು, ಗಾದ್ಯರು, ಮನಸ್ಸೆಕುಲದ ಅರ್ಧ ಜನರು ಇವರನ್ನು ಹಲಹ, ಹಾಬೋರ್ ಹಾರ ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆಯೊಯ್ದರು. ಅವರು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ಅಲ್ಲಿಂದಲೂ ತಲೆಯ ಮೇಲೆ ಕೈಯಿಟ್ಟುಕೊಂಡು ಹೊರಡುವಿ; ಏಕಂದರೆ ನಿನ್ನ ಭರವಸಗಳನ್ನು ಯೆಹೋವನು ನಿರಾಕರಿಸಿದ್ದಾನೆ; ಅವುಗಳ ಮುಖಾಂತರ ನಿನ್ನ ಕಾರ್ಯವು ಸಾಗದು.


ಆದಕಾರಣ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆ, ಐಗುಪ್ತವನ್ನು ಮರೆಹೊಗುವದರಿಂದ ಅವಮಾನ.


ಆಗ ಕರ್ತನು ಯೂಫ್ರೇಟೀಸ್ ನದಿಯ ಆಚೆಗಿರುವ ಅಶ್ಶೂರದ ರಾಜನೆಂಬ ಬಾಡಿಗೆಯ ಕ್ಷೌರದ ಕತ್ತಿಯಿಂದ [ಯೆಹೂದದ] ತಲೆಯನ್ನೂ ಕಾಲಕೂದಲನ್ನೂ ಬೋಳಿಸುವನು; ಅದು ಗಡ್ಡವನ್ನು ಸಹ ತೆಗೆದುಬಿಡುವದು.


ಇದಲ್ಲದೆ ಅವನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರ್ಯಕ್ಕೆ ಬಂದು ಮೂರು ವರುಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.


ರೂಬೇನ್ಯರ ಪ್ರಭುಗಳಲ್ಲೊಬ್ಬನಾಗಿದ್ದ ಇವನನ್ನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಸೆರೆಯೊಯ್ದನು.


ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು.


ಮತ್ತು ಯೆಹೂದದಿಂದ ಎಫ್ರಾಯೀಮು ಅಗಲಿದಂದಿನಿಂದ ಈಚೆಗೆ ಸಂಭವಿಸಿದ ದುಷ್ಕಾಲವನ್ನು ಯೆಹೋವನು ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಬರಮಾಡುವನು; ಆ ದುಷ್ಕಾಲವು ಅಶ್ಶೂರದ ಅರಸೇ.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಮತ್ತು ಇಷ್ಟೂ ಸಾಲದೆಂದು ಅಶ್ಯೂರ್ಯರೊಂದಿಗೂ ಹಾದರಮಾಡಿದಿ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು