Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:21 - ಕನ್ನಡ ಸತ್ಯವೇದವು J.V. (BSI)

21 ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆಹಾಜನು ಯೆಹೋವನ ಆಲಯದ ಅರಮನೆಯ ಪ್ರಭುಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ ಅಶ್ಶೂರದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಹಾಜನು, ಸರ್ವೇಶ್ವರನ ಆಲಯದ ಹಾಗು ಅರಮನೆಯ ಅಧಿಪತಿಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ, ಅಸ್ಸೀರಿಯದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆಹಾಜನು ದೇವರ ಆಲಯದಿಂದಲೂ ರಾಜ ನಿವಾಸದಿಂದಲೂ ಮತ್ತು ರಾಜಕುಮಾರರ ಮನೆಯಿಂದಲೂ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದು ಅಶ್ಶೂರದ ಅರಸನಿಗೆ ಕೊಟ್ಟರೂ ಅಶ್ಶೂರದ ಅರಸನು ಆಹಾಜನಿಗೆ ಸಹಾಯ ಮಾಡದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:21
8 ತಿಳಿವುಗಳ ಹೋಲಿಕೆ  

ಹೀಗೆ ಯೆರೂಸಲೇವಿುಗೆ ವಿರೋಧವಾಗಿ ಬಂದ ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ದುಡುಕಿ ಮುಡುಪುಕಟ್ಟುವದು ಮನುಷ್ಯನಿಗೆ ಉರುಲು; ಹರಕೆಹೊತ್ತ ಮೇಲೆ ವಿಚಾರಪಡಬೇಕಾಗುತ್ತದೆ.


ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ ಅವನಿಗೆ -


ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು ಮುರುಕಹಲ್ಲು, ಜಾರುವ ಕಾಲು.


ಹೊಸ ಹೊಸ ಮಾರ್ಗಗಳನ್ನು ಅನುಸರಿಸಲು ಏಕೆ ಅಷ್ಟು ಅತ್ತಿತ್ತ ಹೋಗುತ್ತೀ? ಅಶ್ಶೂರದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿಯೋ ಹಾಗೆಯೇ ಐಗುಪ್ತದ ವಿಷಯವಾಗಿಯೂ ಆಶಾಭಂಗಪಡುವಿ.


ಹೀಗಿರಲು ಎಫ್ರಾಯೀಮು ತಾನು ರೋಗಿಯೆಂದು ತಿಳುಕೊಂಡಿತು, ಯೆಹೂದವು ತನ್ನ ವ್ರಣವನ್ನು ನೋಡಿಕೊಂಡಿತು; ಆಗ ಎಫ್ರಾಯೀಮು ಅಶ್ಶೂರದ ಕಡೆಗೆ ತಿರುಗಿಕೊಂಡು ಜಗಳಗಂಟ ಮಹಾರಾಜನ ಬಳಿಗೆ ದೂತರನ್ನು ಕಳುಹಿಸಿತು; ಆದರೆ ಅವನು ನಿಮ್ಮನ್ನು ಸ್ವಸ್ಥಮಾಡಲಾರನು, ನಿಮ್ಮ ವ್ರಣವನ್ನು ಗುಣಪಡಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು