Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:3 - ಕನ್ನಡ ಸತ್ಯವೇದವು J.V. (BSI)

3 ಅವನು ಬೆನ್‍ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಆಹುತಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೆನ್‌ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:3
20 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ತಮ್ಮ ಗಂಡುಹೆಣ್ಣು ಮಕ್ಕಳನ್ನು ಯಾರೂ ಮೋಲೆಕನಿಗೋಸ್ಕರ ಆಹುತಿ ಕೊಡದಂತೆ ಬೇನ್‍ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.


ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗಿನ ಪಶ್ಚಿಮದಲ್ಲಿಯೂ ರೆಫಾಯೀಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.


ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ತಮ್ಮ ಗಂಡು ಹೆಣ್ಣುಮಕ್ಕಳನ್ನು ಮೋಲೆಕ್ ದೇವತೆಗಾಗಿ ಆಹುತಿಕೊಡುವದಕ್ಕೆ ಬೆನ್‍ಹಿನ್ನೋಮ್ ತಗ್ಗಿನಲ್ಲಿನ ಬಾಳನ ಪೂಜಾಸ್ಥಳಗಳನ್ನು ಕಟ್ಟಿ ಯೆಹೂದವನ್ನು ಪಾಪಕ್ಕೆ ಸಿಕ್ಕಿಸಿದ್ದಾರೆ; ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ, ಅದರ ಸಂಕಲ್ಪವೂ ನನ್ನ ಮನಸ್ಸಿನಲ್ಲಿ ಹುಟ್ಟಲಿಲ್ಲ.


ಯೆರೂಸಲೇವಿುನ ಮನೆಗಳೂ ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲಾ ಹೊಲಸಾಗಿ ತೋಫೆತೆಂಬ ಸ್ಥಳಕ್ಕೆ ಸಮಾನವಾಗುವವು.


ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವದನ್ನು ಕಂಡೆನೆಂಬ ನೆವ ನಿನಗಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ [ನಿನ್ನನ್ನು ದಂಡಿಸುವೆನು].


ಇದಲ್ಲದೆ ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಜನಾಂಗಗಳ ಹೇಸಿಗೆ ಕೆಲಸಗಳನ್ನು ಅನುಸರಿಸಿ ತನ್ನ ಮಗನನ್ನು ಆಹುತಿಕೊಟ್ಟನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಹೇಸಿಗೆ ಕೆಲಸಗಳನ್ನು ಅನುಸರಿಸಲೇಬಾರದು.


ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,


ಈ ಇಸ್ರಾಯೇಲ್ಯರು ಬಾಳನ ಪ್ರತಿಮೆಗಳನ್ನು ಪೂಜಿಸಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು.


ಅವರು ಯೆಹೋವನನ್ನು ಬಿಟ್ಟು ಬಾಳ್ ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸುವವರಾದದರಿಂದ


ಪ್ರಧಾನಯಾಜಕರೂ ಪ್ರಜೆಗಳೂ ಕೂಡಾ ಮಹಾದ್ರೋಹಿಗಳಾಗಿ ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇವಿುನ ದೇವಾಲಯವನ್ನು ಹೊಲೆಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು