Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 28:6 - ಕನ್ನಡ ಸತ್ಯವೇದವು J.V. (BSI)

6 ರೆಮಲ್ಯನ ಮಗನಾದ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ರೆಮಲ್ಯನ ಮಗನು ಇಸ್ರಾಯೇಲ್ಯರ ಅರಸನು ಆದ ಪೆಕಹ ಎಂಬವನು ಒಂದೇ ದಿನ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರೂ ಯುದ್ಧವೀರರು. ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತೊರೆದು ಬಿಟ್ಟಿದ್ದೇ ಇದಕ್ಕೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 28:6
27 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಅಜರ್ಯನ ಆಳಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲ್ಯರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರುಷ ಆಳಿದನು.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲ್ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.


ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲ್ಯರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಯೆರೂಸಲೇವಿುಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವದು ಅವರಿಂದ ಆಗಲಿಲ್ಲ.


ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.


ನೀವು ಆತನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರೆ ಆತನು ವಿಮುಖನಾಗಿ ಮೇಲಿಗೆ ಬದಲಾಗಿ ಕೇಡನ್ನು ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವನು ಅಂದನು.


ನೀವು ದೇವರಾದ ಯೆಹೋವನ ನಿಬಂಧನೆಯನ್ನು ಮೀರಿ ಅನ್ಯದೇವತೆಗಳಿಗೆ ಅಡ್ಡಬಿದ್ದು ಸೇವಿಸಿದರೆ ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುವದು; ಮತ್ತು ಆತನು ಕೊಟ್ಟ ಒಳ್ಳೆಯ ದೇಶದಿಂದ ನೀವು ತೆಗೆದುಹಾಕಲ್ಪಟ್ಟು ಬೇಗನೆ ನಾಶವಾದೀರಿ ಅಂದನು.


ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು - ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಮಾಡದವರೂ ದ್ರೋಹಿಗಳಾದ ಮಕ್ಕಳೂ ಆಗಿದ್ದಾರೆ.


ನೀವು ಶತ್ರುಗಳಿಂದ ಪರಾಜಯವನ್ನು ಹೊಂದುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಅಶುಭಗಳು ನಿಮಗೆ ಪ್ರಾಪ್ತವಾಗುವವು -


ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಾಯೀಮ್ ದೇಶದ ಜಿಕ್ರಿಯೆಂಬ ಶೂರನು ಕೊಂದನು.


ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರಸನೂ ಆದ ಪೆಕಹ ಎಂಬವರು ಯೆರೂಸಲೇವಿುನ ಮೇಲೆ ದಂಡೆತ್ತಿ ಬಂದರು. (ಅದನ್ನು ಜಯಿಸುವದಕ್ಕೆ ಆಗಲಿಲ್ಲ.)


ನಿನ್ನ ಕೆಟ್ಟತನವು ಬೈಲಿಗೆ ಬರುವದಕ್ಕೆ ಮೊದಲು ಆ ನಿನ್ನ ಗರ್ವಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಅವರು ಆತನನ್ನು ಹಿಂಬಾಲಿಸದೆ ತಿರುಗಿಕೊಂಡು ಆತನ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.


ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವದು.


[ಚೀಯೋನ್ ನಗರಿಯೇ,] ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು, ನಿನ್ನ ಶೌರ್ಯವು ಯುದ್ಧದಲ್ಲಿ ಅಡಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು