2 ಪೂರ್ವಕಾಲ ವೃತ್ತಾಂತ 28:9 - ಕನ್ನಡ ಸತ್ಯವೇದವು J.V. (BSI)9 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ. ಅಧ್ಯಾಯವನ್ನು ನೋಡಿ |