2 ಪೂರ್ವಕಾಲ ವೃತ್ತಾಂತ 29:11 - ಕನ್ನಡ ಸತ್ಯವೇದವು J.V. (BSI)11 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯೆಹೋವನು ತನ್ನನ್ನು ಆರಾಧಿಸುವದಕ್ಕೂ ಧೂಪಹಾಕುವದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡನಲ್ಲಾ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಯೆಹೋವನು ತನ್ನನ್ನು ಆರಾಧಿಸುವುದಕ್ಕೂ ಧೂಪಹಾಕುವುದಕ್ಕೂ ನಿಮ್ಮನ್ನು ತನ್ನ ಸಾನ್ನಿಧ್ಯ ಸೇವಕರನ್ನಾಗಿ ಆರಿಸಿಕೊಂಡನಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದ್ದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳುಮಾಡಬೇಡಿ. ತನ್ನ ಸೇವೆಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |