2 ಪೂರ್ವಕಾಲ ವೃತ್ತಾಂತ 29:18 - ಕನ್ನಡ ಸತ್ಯವೇದವು J.V. (BSI)
18 ಆಮೇಲೆ ಅವರು ಅರಮನೆಯೊಳಕ್ಕೆ ಹೋಗಿ ಅರಸನಾದ ಹಿಜ್ಕೀಯನಿಗೆ - ನಾವು ಯೆಹೋವನ ಸಮಸ್ತಾಲಯವನ್ನೂ ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಅದರ ಸಾಮಾನುಗಳನ್ನೂ ಶುದ್ಧಮಾಡಿದೆವು.
18 ಆಮೇಲೆ ಅವರು ಅರಮನೆಯೊಳಗೆ ಹೋಗಿ, ಅರಸನಾದ ಹಿಜ್ಕೀಯನಿಗೆ, “ನಾವು ಯೆಹೋವನ ಸಮಸ್ತಾಲಯವನ್ನೂ, ಯಜ್ಞವೇದಿಯನ್ನೂ, ಅದರ ಉಪಕರಣಗಳನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನೂ ಹಾಗು ಅದರ ಸಾಮಾನುಗಳನ್ನೂ ಶುದ್ಧಿಮಾಡಿದೆವು.
18 ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.
18 ಅನಂತರ ಅವರು ಅರಸನಾದ ಹಿಜ್ಕೀಯನ ಬಳಿಗೆ ಹೋಗಿ, “ಅರಸನಾದ ಹಿಜ್ಕೀಯನೇ, ನಾವು ದೇವಾಲಯವನ್ನೂ ಯಜ್ಞವೇದಿಕೆಯನ್ನೂ ದೇವಾಲಯದ ಸಾಮಾಗ್ರಿಗಳನ್ನೂ ಶುದ್ಧ ಮಾಡಿದೆವು. ರೊಟ್ಟಿಯನ್ನಿಡುವ ಮೇಜನ್ನೂ ಶುದ್ಧ ಮಾಡಿದೆವು.
18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.
ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
ಅವರು ಮೊದಲನೆಯ ತಿಂಗಳಿನ ಮೊದನೆಯ ದಿನದಲ್ಲಿ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಯೆಹೋವನ ಆಲಯವನ್ನು ಶುದ್ಧಪಡಿಸುವದರಲ್ಲಿ ಎಂಟು ದಿನಗಳು ಕಳೆದುಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ತೀರಿತು.