Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:21 - ಕನ್ನಡ ಸತ್ಯವೇದವು J.V. (BSI)

21 ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ರಾಜ್ಯಾಡಳಿತ ದೇವಾಲಯ, ಯೆಹೂದ ಪ್ರಜೆಗಳು ಇವುಗಳಿಗೋಸ್ಕರ ದೋಷಪರಿಹಾರಕ ಯಜ್ಞಮಾಡುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಆಡು ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮ ಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಏಳು ಕುರಿಮರಿಗಳನ್ನೂ ಏಳು ಆಡುಗಳನ್ನೂ ತಂದರು. ಈ ಪ್ರಾಣಿಗಳನ್ನೆಲ್ಲಾ ಇಡೀ ಯೆಹೂದ ಪ್ರಾಂತ್ಯದಲ್ಲಿರುವ ಪ್ರಜೆಯವರಿಗಾಗಿ, ದೇವಾಲಯದ ಶುದ್ಧೀಕರಣಕ್ಕಾಗಿ ಮತ್ತು ಯೆಹೂದ ರಾಜ್ಯಕ್ಕಾಗಿ ಪಾಪಪರಿಹಾರ ಯಜ್ಞವಾಗಿ ಅರ್ಪಿಸಿದರು. ಅರಸನಾದ ಹಿಜ್ಕೀಯನು ಆರೋನನ ಸಂತತಿಯವರಾದ ಯಾಜಕರಿಗೆ ಆ ಪಶುಗಳನ್ನು ಯೆಹೋವನ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಮಾಡಲು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:21
12 ತಿಳಿವುಗಳ ಹೋಲಿಕೆ  

ಹಬ್ಬದ ಏಳು ದಿನಗಳಲ್ಲಿಯೂ ಯೆಹೋವನಿಗೆ ಸಮರ್ಪಿಸತಕ್ಕ ಸರ್ವಾಂಗಹೋಮಕ್ಕಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಯಜ್ಞಕ್ಕಾಗಿ ದಿನವಹಿ ಒಂದು ಹೋತವನ್ನು ಕೊಡಲಿ.


ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.


ದೇಶಾಂತರದ ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್‍ದೇವರಿಗೆ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿ ಮರಿಗಳನ್ನೂ ಸಮಸ್ತ ಇಸ್ರಾಯೇಲ್ಯರ ನಿವಿುತ್ತವಾಗಿ ಹನ್ನೆರಡು ಹೋರಿಗಳನ್ನೂ ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗ ಹೋಮವೇ.


ಉತ್ಸವದಿಂದ ತರುತ್ತಿರುವಾಗ ಅದನ್ನು ಹೊತ್ತ ಲೇವಿಯರಿಗೆ ದೇವರ ಸಹಾಯ ದೊರೆತದರಿಂದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಯಜ್ಞಮಾಡಿದರು.


ಆಗ ಬಿಳಾಮನು ಬಾಲಾಕನಿಗೆ - ಇಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸು ಎಂದು ಹೇಳಲಾಗಿ


ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸಬೇಕು ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬೈಲು ಎಂಬ ಸ್ಥಳಕ್ಕೆ ಕರಕೊಂಡುಹೋಗಿ ಅಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಇಸ್ರಾಯೇಲ್ಯರ ಜನಸಮೂಹದಿಂದ ದೋಷಪರಿಹಾರಕಯಜ್ಞಕ್ಕಾಗಿ ಎರಡು ಹೋತಗಳನ್ನೂ ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.


ಅರಸನಾದ ಹಿಜ್ಕೀಯನು [ಮರುದಿನ] ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು