25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.
25 ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.
25 ದಾವೀದನೂ ಅರಸನ ದರ್ಶಿಯಾಗಿದ್ದ ಗಾದನೂ ಮತ್ತು ಪ್ರವಾದಿಯಾಗಿದ್ದ ನಾತಾನನೂ ಆಜ್ಞಾಪಿಸಿದಂತೆ, ಅರಸನಾದ ಹಿಜ್ಕೀಯನು ಲೇವಿಯರನ್ನು ತಾಳ, ತಂತಿವಾದ್ಯ ಮತ್ತು ಕಿನ್ನರಿಗಳೊಂದಿಗೆ ದೇವಾಲಯದಲ್ಲಿ ಇರಿಸಿದನು. ಈ ಆಜ್ಞೆಯು ಯೆಹೋವನಿಂದ ಪ್ರವಾದಿಗಳ ಮೂಲಕ ಬಂದಿತ್ತು.
25 ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.
ಅಧಿಕಾರಿಗಳನ್ನಾಗಿ ಆರು ಸಾವಿರ ಮಂದಿಯನ್ನೂ ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಮಂದಿಯನ್ನೂ ತಾನು ಸಿದ್ಧಮಾಡಿಸಿದ ವಾದ್ಯಗಳಿಂದ ಯೆಹೋವನನ್ನು ಭಜಿಸುವದಕ್ಕಾಗಿ ನಾಲ್ಕು ಸಾವಿರ ಮಂದಿಯನ್ನೂ ನೇವಿುಸಿದನು.
ಆಸಾಫ್ಯರಾದ ಗಾಯಕರು ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್, ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವದಕ್ಕೆ ಕಾರಣವಿರಲಿಲ್ಲ.
ವಾದ್ಯಗಾರರ ಪಟ್ಟಿ. ಅವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳೂ ಕೆಲಸದಲ್ಲಿರುತ್ತಿದ್ದದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
ಯೆರೂಸಲೇವಿುನಲ್ಲಿ ಕೂಡಿಬಂದ ಇಸ್ರಾಯೇಲ್ಯರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಯೆಹೋವನನ್ನು ಪ್ರತಿದಿನವೂ ಕೀರ್ತಿಸುತ್ತಾ ಇದ್ದರು.