2 ಪೂರ್ವಕಾಲ ವೃತ್ತಾಂತ 29:27 - ಕನ್ನಡ ಸತ್ಯವೇದವು J.V. (BSI)27 ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಹಿಜ್ಕೀಯನು ಯಜ್ಞವೇದಿಯ ಮೇಲೆ ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.ಹೀಗೆ ಸರ್ವಾಂಗಹೋಮ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಾಯೇಲ್ ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವುದೂ, ತುತ್ತೂರಿ ಊದುವುದೂ ಆರಂಭವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಬಳಿಕ ಹಿಜ್ಕೀಯನು ಸರ್ವಾಂಗಹೋಮವನ್ನು ಅರ್ಪಿಸಲು ಆಜ್ಞಾಪಿಸಿದನು. ಸರ್ವಾಂಗಹೋಮ ಆರಂಭವಾದ ಕೂಡಲೇ ದೇವರಿಗೆ ಸ್ತೋತ್ರಗಾನ ಹಾಡುವದೂ ಪ್ರಾರಂಭವಾಯಿತು. ತುತ್ತೂರಿಯನ್ನು ಊದಿ ದಾವೀದನ ವಾದ್ಯಗಳನ್ನು ಬಾರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು. ಅಧ್ಯಾಯವನ್ನು ನೋಡಿ |
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಯೆಹೋವನ ಗಾಯನಸೇವೆಗೋಸ್ಕರ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿದ್ದವು. ಇವರು ರಾಜ ಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡಿಸುತ್ತಾ - ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಮರ್ಪಿಸಿರಿ, ಆತನ ಕೃಪೆಯು ಶಾಶ್ವತವಾಗಿದೆ ಎಂಬದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಾಯೇಲ್ಯರೆಲ್ಲರೂ ನಿಂತಿದ್ದರು.