Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:3 - ಕನ್ನಡ ಸತ್ಯವೇದವು J.V. (BSI)

3 ಅವನು ತನ್ನ ಆಳಿಕೆಯ ಮೊದಲನೆಯ ವರುಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹಿಜ್ಕೀಯನು ದೇವಾಲಯದ ಬಾಗಿಲುಗಳನ್ನು ದುರಸ್ತಿಮಾಡಿ ಭದ್ರಪಡಿಸಿದನು; ತನ್ನ ಆಳ್ವಿಕೆಯ ಮೊದಲನೇ ವರ್ಷದ ಮೊದಲಿನ ತಿಂಗಳಿನಲ್ಲಿಯೇ ದೇವಾಲಯವನ್ನು ಮತ್ತೆ ತೆರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:3
11 ತಿಳಿವುಗಳ ಹೋಲಿಕೆ  

ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.


ಅದರ ಮಂಟಪದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ನಂದಿಸಿ ಇಸ್ರಾಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಹಾಕುವದನ್ನೂ ಸರ್ವಾಂಗಹೋಮ ಸಮರ್ಪಿಸುವದನ್ನೂ ನಿಲ್ಲಿಸಿಬಿಟ್ಟರು.


ತನ್ನ ಮಗನನ್ನು ನಾನು ಅನ್ಯಜನರಲ್ಲಿ ಪ್ರಸಿದ್ಧಿಪಡಿಸುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಫೈಸಿದಾಗಲೇ ನಾನು ಮನುಷ್ಯರ ಆಲೋಚನೆಯನ್ನು ವಿಚಾರಿಸದೆ


ಹೀಗಿರುವದರಿಂದ, ನೀವು ಮೊದಲು ದೇವರ ರಾಜ್ಯಕ್ಕಾಗಿಯೂ ನೀತಿಗಾಗಿಯೂ ತವಕಪಡಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ಅವನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರುಷ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇದ್ದ ಪೂಜಾಸ್ಥಳಗಳನ್ನೂ ಅಶೇರ ಸ್ತಂಭಗಳನ್ನೂ ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಪಡಿಸಿದನು.


ಆಮೇಲೆ ಯಾಜಕರನ್ನೂ ಲೇವಿಯರನ್ನೂ [ದೇವಾಲಯದ] ಮೂಡಣದಿಕ್ಕಿನ ಬೈಲಿನಲ್ಲಿ ಕೂಡಿಸಿ ಅವರಿಗೆ -


ಅವರು ಮೊದಲನೆಯ ತಿಂಗಳಿನ ಮೊದನೆಯ ದಿನದಲ್ಲಿ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಯೆಹೋವನ ಆಲಯದ ಮಂಟಪಕ್ಕೆ ಕೈಹಾಕಿದರು. ಯೆಹೋವನ ಆಲಯವನ್ನು ಶುದ್ಧಪಡಿಸುವದರಲ್ಲಿ ಎಂಟು ದಿನಗಳು ಕಳೆದುಹೋದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ತೀರಿತು.


ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು