2 ಪೂರ್ವಕಾಲ ವೃತ್ತಾಂತ 29:30 - ಕನ್ನಡ ಸತ್ಯವೇದವು J.V. (BSI)30 ಅರಸನಾದ ಹಿಜ್ಕೀಯನೂ ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು ಅವರು ಉತ್ಸಾಹದಿಂದ ಸ್ತುತಿಸುತ್ತಾ ಬೊಗ್ಗಿಕೊಂಡು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅರಸನಾದ ಹಿಜ್ಕೀಯನೂ, ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು, ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ರಾಜನಾದ ಹಿಜ್ಕೀಯನು ಮತ್ತು ಅವನ ಅಧಿಕಾರಿಗಳು ಯೆಹೋವನಿಗೆ ಸ್ತೋತ್ರ ಮಾಡಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಆಸಾಫ ಮತ್ತು ಅರಸನಾಗಿದ್ದ ದಾವೀದನು ರಚಿಸಿದ್ದ ಹಾಡುಗಳನ್ನು ಗಾಯಕರು ಹಾಡಿ ದೇವರನ್ನು ಸ್ತುತಿಸಿದರು. ಹೀಗೆ ಜನರೆಲ್ಲಾ ಸಂತೋಷಪಟ್ಟರು. ಅವರೆಲ್ಲರು ಅಡ್ಡಬಿದ್ದು ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು. ಅಧ್ಯಾಯವನ್ನು ನೋಡಿ |