2 ಪೂರ್ವಕಾಲ ವೃತ್ತಾಂತ 29:31 - ಕನ್ನಡ ಸತ್ಯವೇದವು J.V. (BSI)31 ಆಮೇಲೆ ಹಿಜ್ಕೀಯನು ಸಮೂಹದವರಿಗೆ - ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರಲ್ಲಾ; ಹತ್ತಿರ ಬಂದು ಯೆಹೋವನ ಆಲಯಕ್ಕೋಸ್ಕರ ಸಮಾಧಾನಯಜ್ಞಗಳನ್ನೂ ಕೃತಜ್ಞತಾ ಯಜ್ಞಗಳನ್ನೂ ಸಮರ್ಪಿಸಿರಿ ಅನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ ಅನೇಕರು ಸ್ವೇಚ್ಫೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆಮೇಲೆ ಹಿಜ್ಕೀಯನು ಸಮೂಹದವರಿಗೆ, “ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರುವಿಯಲ್ಲಾ; ಹತ್ತಿರ ಬಂದು ಯೆಹೋವನಿಗೆ ಸ್ತೋತ್ರಮಾಡಿ ಆತನ ಆಲಯಕ್ಕೋಸ್ಕರ ಸಮಾಧಾನ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವ ಇಚ್ಛೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹಿಜ್ಕೀಯನು ಜನರಿಗೆ, “ಯೆಹೂದದ ಜನರೇ, ನೀವೀಗ ನಿಮ್ಮನ್ನು ಯೆಹೋವನಿಗೆ ಒಪ್ಪಿಸಿದ್ದೀರಿ. ನೀವೀಗ ಬಂದು ದೇವಾಲಯದಲ್ಲಿ ನಿಮ್ಮನಿಮ್ಮ ಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿರಿ” ಎಂದು ಹೇಳಲು ಜನರು ತಮ್ಮ ಯಜ್ಞಗಳನ್ನು ಸಮರ್ಪಿಸಲು ಮುಂದೆ ಬಂದರು. ಸರ್ವಾಂಗಹೋಮ ಅರ್ಪಿಸಬೇಕೆಂದಿದ್ದವರು ಸರ್ವಾಂಗಹೋಮಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು. ಅಧ್ಯಾಯವನ್ನು ನೋಡಿ |