2 ಪೂರ್ವಕಾಲ ವೃತ್ತಾಂತ 29:34 - ಕನ್ನಡ ಸತ್ಯವೇದವು J.V. (BSI)34 ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಯಾಜಕರು ಕೆಲವು ಮಂದಿಯಾದುದ್ದರಿಂದ ಸರ್ವಾಂಗಹೋಮದ ಪ್ರಾಣಿಗಳ ಚರ್ಮವನ್ನು ಸುಲಿಯುವುದು ಅವರಿಂದ ಆಗದೆ ಹೋಯಿತು. ಆದುದರಿಂದ ಮಿಕ್ಕ ಯಾಜಕರೂ ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸವು ಮುಗಿಯುವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು. ತಮ್ಮನ್ನು ಶುದ್ಧಿಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಲ್ಲಿ ಪಶುಗಳನ್ನು ವಧಿಸಿ ಅದರ ಚರ್ಮಸುಲಿದು ಯಜ್ಞಕ್ಕಾಗಿ ಸಿದ್ಧಪಡಿಸಲು ಸಾಕಷ್ಟು ಯಾಜಕರು ಇರಲಿಲ್ಲ. ಆಗ ಅವರ ಬಂಧುಗಳಾದ ಲೇವಿಯರು ಬಂದು ಆ ಕೆಲಸ ಮುಗಿಯುವ ತನಕ ಅವರಿಗೆ ಸಹಾಯಮಾಡಿದರು. ಯೆಹೋವನ ಸೇವೆಗೆ ತಮ್ಮನ್ನು ಸಿದ್ಧಪಡಿಸಿಕೊಳ್ಳಲು ಲೇವಿಯರು ಯಾಜಕರಿಗಿಂತ ಹೆಚ್ಚು ಉತ್ಸುಕತೆಯಲ್ಲಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು. ಅಧ್ಯಾಯವನ್ನು ನೋಡಿ |