Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:5 - ಕನ್ನಡ ಸತ್ಯವೇದವು J.V. (BSI)

5 ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧಪಡಿಸಿಕೊಂಡು ನಿಮ್ಮ ಪಿತೃಗಳ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರಿಗೆ, “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನು ಶುದ್ಧೀಕರಿಸಿಕೊಂಡು ನಿಮ್ಮ ಪೂರ್ವಿಕರ ದೇವರಾದ ಯೆಹೋವನ ಪವಿತ್ರಾಲಯದಲ್ಲಿರುವ ಹೊಲಸನ್ನೆಲ್ಲಾ ಹೊರಗೆ ಹಾಕಿ ಆಲಯವನ್ನು ಶುದ್ಧೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:5
21 ತಿಳಿವುಗಳ ಹೋಲಿಕೆ  

ಮೋಶೆಯಿಂದ ಪ್ರಕಟವಾದ ಯೆಹೋವನ ವಿಧಿಗನುಸಾರವಾಗಿ ನಿಮ್ಮ ಸಹೋದರರು ಪಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗೋಸ್ಕರ ಎಲ್ಲವನ್ನೂ ಸಿದ್ಧಮಾಡಿರಿ ಎಂದು ಆಜ್ಞಾಪಿಸಿದನು.


ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಚರ್ಮವನ್ನು ಸುಲಿಯುವದು [ಶುದ್ಧಿಪಡಿಸಿಕೊಂಡ] ಕೆಲವು ಮಂದಿ ಯಾಜಕರಿಂದ ಆಗದೆ ಹೋಯಿತು. ಆದದರಿಂದ ವಿುಕ್ಕ ಯಾಜಕರು ತಮ್ಮನ್ನು ಶುದ್ಧಿಪಡಿಸಿಕೊಳ್ಳುವವರೆಗೂ ಆ ಕೆಲಸ ತೀರುವ ತನಕ ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯಮಾಡುತ್ತಿದ್ದರು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆಗ ಆ ತೇಜೋರೂಪಿಯು ಮನುಷ್ಯಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇವಿುನವರೆಗೆ ಒಯ್ದು ಒಳಗಣ ಪ್ರಾಕಾರದ ಬಡಗಣ ಬಾಗಿಲ ಮುಂದೆ ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ದೇವರ ದರ್ಶನದಲ್ಲಿ ಕಂಡುಬಂತು;


ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ಆಮೇಲೆ ಯಾಜಕರನ್ನೂ ಲೇವಿಯರನ್ನೂ [ದೇವಾಲಯದ] ಮೂಡಣದಿಕ್ಕಿನ ಬೈಲಿನಲ್ಲಿ ಕೂಡಿಸಿ ಅವರಿಗೆ -


ಕೊಠಡಿಯನ್ನು ಶುದ್ಧಿಮಾಡುವದಕ್ಕೆ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯ ದ್ರವ್ಯ, ಧೂಪ ಇವುಗಳನ್ನು ತಿರಿಗಿ ಅಲ್ಲಿಡಿಸಿದೆನು.


ಜನರನ್ನು ಒಟ್ಟಿಗೆ ಬರಮಾಡಿರಿ, ಕೂಟವನ್ನು ಏರ್ಪಡಿಸಿರಿ, ವೃದ್ಧರನ್ನು ಕೂಡಿಸಿರಿ, ಮಕ್ಕಳನ್ನೂ ಮೊಲೆಕೂಸುಗಳನ್ನೂ ಸೇರಿಸಿರಿ; ವಧೂವರರೂ ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.


ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.


ಯೆಹೋವನೇ, ನಿನ್ನ ಆಜ್ಞೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ಆಗ ಆತನು ನನಗೆ - ನರಪುತ್ರನೇ, ಇವರು ಮಾಡುವದನ್ನು ನೋಡಿದಿಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡಿಸುವ ಅಧಿಕದುರಾಚಾರಗಳನ್ನು ಕಂಡಿಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು