2 ಪೂರ್ವಕಾಲ ವೃತ್ತಾಂತ 29:6 - ಕನ್ನಡ ಸತ್ಯವೇದವು J.V. (BSI)6 ನಮ್ಮ ಪಿತೃಗಳು ನಮ್ಮ ದೇವರಾದ ಯೆಹೋವನಿಗೆ ದ್ರೋಹ ಮಾಡಿ ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ಬಿಟ್ಟರು. ಅವರು ಆತನ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಮ್ಮ ಪೂರ್ವಿಕರು ಯೆಹೋವನನ್ನು ತೊರೆದು ಆತನ ದೃಷ್ಟಿಯಲ್ಲಿ ಪಾಪಮಾಡಿದರು; ಆತನ ಆಲಯಕ್ಕೆ ವಿಮುಖರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ. ಅಧ್ಯಾಯವನ್ನು ನೋಡಿ |
ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.