Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 29:7 - ಕನ್ನಡ ಸತ್ಯವೇದವು J.V. (BSI)

7 ಅದರ ಮಂಟಪದ ಬಾಗಲುಗಳನ್ನು ಮುಚ್ಚಿ ದೀಪಗಳನ್ನು ನಂದಿಸಿ ಇಸ್ರಾಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಹಾಕುವದನ್ನೂ ಸರ್ವಾಂಗಹೋಮ ಸಮರ್ಪಿಸುವದನ್ನೂ ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರು ದೇವಾಲಯದ ಮಂಟಪದ ಬಾಗಿಲನ್ನು ಮುಚ್ಚಿ ಉರಿಯುತ್ತಿದ್ದ ದೀಪಗಳನ್ನು ನಂದಿಸಿಬಿಟ್ಟರು. ಇಸ್ರೇಲ್ ದೇವರಾದ ಯೆಹೋವನಿಗೆ ಪವಿತ್ರ ಸ್ಥಳದಲ್ಲಿ ಧೂಪಸುಡುವದನ್ನೂ ಸರ್ವಾಂಗಹೋಮಗಳನ್ನು ಅರ್ಪಿಸುವದನ್ನೂ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 29:7
7 ತಿಳಿವುಗಳ ಹೋಲಿಕೆ  

ಇದಲ್ಲದೆ ಆಹಾಜನು ದೇವಾಲಯದ ಸಾಮಾನುಗಳನ್ನು ಕೂಡಿಸಿ ಅವುಗಳನ್ನು ಕತ್ತರಿಸಿಬಿಟ್ಟನು; ಯೆಹೋವನ ಆಲಯದ ಬಾಗಲುಗಳನ್ನು ಮುಚ್ಚಿ ಯೆರೂಸಲೇವಿುನ ಪ್ರತಿಯೊಂದು ಮೂಲೆಯಲ್ಲಿಯೂ ಯಜ್ಞವೇದಿಗಳನ್ನು ಕಟ್ಟಿಸಿದನು.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಅವನು ತನ್ನ ಆಳಿಕೆಯ ಮೊದಲನೆಯ ವರುಷದ ಮೊದಲನೆಯ ತಿಂಗಳಲ್ಲಿ ಯೆಹೋವನ ಆಲಯದ ಬಾಗಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.


ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದದ್ದೇನಂದರೆ - ಒಂದು ವರುಷದ ಎರಡು ಕುರಿಗಳನ್ನು ದಿನಂಪ್ರತಿಯೂ ಹೋಮಮಾಡಬೇಕು.


ಆರೋನನು ಪ್ರತಿನಿತ್ಯವೂ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು