2 ಪೂರ್ವಕಾಲ ವೃತ್ತಾಂತ 30:1 - ಕನ್ನಡ ಸತ್ಯವೇದವು J.V. (BSI)1 ತರುವಾಯ ಹಿಜ್ಕೀಯನು - ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು ಎಲ್ಲಾ ಇಸ್ರಾಯೇಲ್ಯರಿಗೂ ಯೆಹೂದ್ಯರಿಗೂ ಎಫ್ರಾಯೀಮ್ಯರಿಗೂ ಮನಸ್ಸೆಯರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ತರುವಾಯ ಹಿಜ್ಕೀಯನು, ಇಸ್ರಾಯೇಲ್ ದೇವರಾದ ಯೆಹೋವನ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬರಬೇಕೆಂದು, ಎಲ್ಲಾ ಇಸ್ರಾಯೇಲರಿಗೂ, ಯೆಹೂದ್ಯರಿಗೂ, ಎಫ್ರಾಯೀಮ್ಯರಿಗೂ, ಮನಸ್ಸೆಯವರಿಗೂ ದೂತರ ಮುಖಾಂತರವಾಗಿ ಮತ್ತು ಪತ್ರಗಳ ಮೂಲಕವಾಗಿ ತಿಳಿಯಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅರಸನಾದ ಹಿಜ್ಕೀಯನು ಯೆಹೂದದವರಿಗೂ ಇಸ್ರೇಲರಿಗೂ ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳವರಿಗೂ ಸಂದೇಶ ಕಳುಹಿಸಿ, ಯೆಹೋವನ ಆಲಯಕ್ಕೆ ಬಂದು ಇಸ್ರೇಲಿನ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸುವಂತೆ ಅವರನ್ನೆಲ್ಲಾ ಆಮಂತ್ರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು. ಅಧ್ಯಾಯವನ್ನು ನೋಡಿ |