Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:13 - ಕನ್ನಡ ಸತ್ಯವೇದವು J.V. (BSI)

13 ಹೀಗೆ ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನಾಚರಿಸುವದಕ್ಕಾಗಿ ಯೆರೂಸಲೇವಿುನಲ್ಲಿ ಕೂಡಿದರು; ಆ ಕೂಟವು ಮಹಾಸಮೂಹವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರುಸಲೇಮಿನಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲು ಎಷ್ಟೋ ಮಂದಿ ಜೆರುಸಲೇಮಿಗೆ ಎರಡನೆಯ ತಿಂಗಳಲ್ಲಿ ಬಂದರು. ಅದು ಮಹಾ ಜನಸಮೂಹವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:13
7 ತಿಳಿವುಗಳ ಹೋಲಿಕೆ  

ಅವರು ಹೆಚ್ಚುಹೆಚ್ಚಾಗಿ ಬಲಹೊಂದಿ ಚೀಯೋನ್‍ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ -


ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇವಿುನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇವಿುನ ಸರ್ವಸಂಘದವರೂ ತಿಳಿದು


ಅವರು ಯೆರೂಸಲೇವಿುನಲ್ಲಿದ್ದ ಯಜ್ಞವೇದಿಗಳನ್ನೂ ಎಲ್ಲಾ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್‍ಹಳ್ಳದಲ್ಲಿ ಬೀಸಾಟುಬಿಟ್ಟರು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಶವಸೋಂಕಿದದರಿಂದ ಅಶುದ್ಧರಾದವರೂ ದೂರ ಪ್ರಯಾಣದಲ್ಲಿರುವವರೂ ಕೂಡ ಯೆಹೋವನ ಆಜ್ಞಾನುಸಾರ ಪಸ್ಕಹಬ್ಬವನ್ನು ಆಚರಿಸಲೇಬೇಕು.


ಇಂಥ ಪಸ್ಕ ಹಬ್ಬವು ಇಸ್ರಾಯೇಲ್ಯರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಾಯೇಲ್ಯರ ಮತ್ತು ಯೆಹೂದ್ಯರ ಅರಸರ ಕಾಲದಲ್ಲಾಗಲಿ ನಡೆಯಲೇ ಇಲ್ಲ.


ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ [ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ] ನಾಚಿಕೆಪಟ್ಟು ತಮ್ಮನ್ನು ಶುದ್ಧಿಪಡಿಸಿಕೊಂಡು ಯೆಹೋವನ ಆಲಯದಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ


ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇವಿುನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು; ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ವಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು