Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:18 - ಕನ್ನಡ ಸತ್ಯವೇದವು J.V. (BSI)

18 ಜನರಲ್ಲಿ ಅನೇಕಾನೇಕರು ಅಂದರೆ ಹೆಚ್ಚಾಗಿ ಎಫ್ರಾಯೀಮ್ ಮನಸ್ಸೆ ಇಸ್ಸಾಕಾರ್ ಜೆಬುಲೂನ್ ಪ್ರಾಂತಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು - ಯೆಹೋವನೇ, ದಯಾಪರನಾದ ದೇವರೇ, ದೇವಾಲಯಯಾತ್ರಿಕರಿಗಿರಬೇಕಾದ ಪರಿಶುದ್ಧತ್ವವು ಅನೇಕರಲ್ಲಿ ಇಲ್ಲದಿದ್ದರೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಜನರಲ್ಲಿ ಅನೇಕರು ಅಂದರೆ, ಹೆಚ್ಚಾಗಿ ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಹಾಗು ಜೆಬುಲೂನ್ ಪ್ರಾಂತ್ಯಗಳವರು ತಮ್ಮನ್ನು ಶುದ್ಧಿಪಡಿಸಿಕೊಳ್ಳದೆ ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ ಪಸ್ಕದ (ಹಬ್ಬ) ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಯೆಹೋವನೇ, ದಯಾಪರನಾದ ದೇವರೇ, ಅವರೆಲ್ಲರಿಗೆ ಕ್ಷಮೆಯನ್ನು ಅನುಗ್ರಹಿಸು” ಎಂದು ವಿಜ್ಞಾಪನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18-19 ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್ ಮತ್ತು ಜೆಬುಲೂನಿನಿಂದ ಬಂದಿದ್ದ ಎಷ್ಟೋ ಮಂದಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಸಿದ್ಧಮಾಡಿಕೊಂಡಿರಲಿಲ್ಲ. ಅವರು ಪಸ್ಕದ ಕುರಿಮರಿಯನ್ನು ಯೋಗ್ಯವಾದ ರೀತಿಯಲ್ಲಿ ತಿನ್ನಲಿಲ್ಲ. ಆದರೆ ಹಿಜ್ಕೀಯನು ಅಂಥವರಿಗೋಸ್ಕರವಾಗಿ, “ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ಇವರು ಯೋಗ್ಯವಾದ ರೀತಿಯಲ್ಲಿ ನಿನ್ನನ್ನು ಆರಾಧಿಸಲು ಬಂದಿದ್ದಾರೆ. ಆದರೆ ಧರ್ಮಶಾಸ್ತ್ರದ ಪ್ರಕಾರ ಅವರು ತಮ್ಮನ್ನು ಶುದ್ಧ ಮಾಡಿಕೊಳ್ಳಲಿಲ್ಲ. ದಯಮಾಡಿ ಅವರನ್ನು ಕ್ಷಮಿಸು. ನಮ್ಮ ಪಿತೃಗಳು ವಿಧೇಯರಾಗಿದ್ದ ದೇವರೇ, ಜನರು ಮೋಶೆಯ ನಿಯಮಕ್ಕನುಸಾರವಾಗಿ ತಮ್ಮನ್ನು ಶುದ್ಧಿ ಮಾಡಿಕೊಂಡಿಲ್ಲದಿದ್ದರೂ ನೀನು ಅವರನ್ನು ದಯವಿಟ್ಟು ಕ್ಷಮಿಸು” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:18
23 ತಿಳಿವುಗಳ ಹೋಲಿಕೆ  

ಪ್ರತಿಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯಲ್ಲಿ ತಕ್ಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ಸ್ವಾಮೀ, ಕೇಳು! ಸ್ವಾಮೀ, ಕ್ಷವಿುಸು! ಸ್ವಾಮೀ, ಲಾಲಿಸು, ಕಾರ್ಯವನ್ನು ಸಾಧಿಸು! ತಡಮಾಡಬೇಡ! ನನ್ನ ದೇವರೇ, ನಿನ್ನ ಜನವೂ ಪಟ್ಟಣವೂ ನಿನ್ನ ಹೆಸರಿನವುಗಳಾದ ಕಾರಣ ನಿನ್ನ ಹೆಸರನ್ನು ಕಾಪಾಡಿಕೋ!


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.


ಯೆಹೋವನು ದಯಾಳುವೂ ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡಿಸುವನು.


ಯೆಹೂದ್ಯರ ಸರ್ವಸಮೂಹದವರೂ ಯಾಜಕರೂ ಲೇವಿಯರೂ ಇಸ್ರಾಯೇಲ್‍ಪ್ರಾಂತಗಳಿಂದ ನೆರೆದುಬಂದವರೆಲ್ಲರೂ ಇಸ್ರಾಯೇಲ್ ಯೆಹೂದ ಪ್ರಾಂತಗಳಲ್ಲಿದ್ದ ಪ್ರವಾಸಿಗಳೂ ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.


ಕೆಲವು ಮಂದಿ ಆಶೇರ್ಯರೂ ಮನಸ್ಸೆಯವರೂ ಜೆಬುಲೂನ್ಯರೂ ಮಾತ್ರ ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇವಿುಗೆ ಬಂದರು.


ಅಶುದ್ಧನಾಗಿ ದೋಷಪರಿಹಾರಮಾಡಿಕೊಳ್ಳದವನು ಯೆಹೋವನ ದೇವಸ್ಥಾನವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ನೀನು ಒಳ್ಳೆಯವನೂ ಒಳ್ಳೆಯದನ್ನು ಮಾಡುವವನೂ ಆಗಿದ್ದೀ; ನಿನ್ನ ನಿಬಂಧನೆಗಳನ್ನು ನನಗೆ ಬೋಧಿಸು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.


ಇವರು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ದೇವಾಲಯಕ್ಕೋಸ್ಕರ ಸಂಗ್ರಹವಾದ ಹಣವನ್ನು ಅಂದರೆ ದ್ವಾರಪಾಲಕರಾದ ಲೇವಿಯರು ಮನಸ್ಸೆ ಎಫ್ರಾಯೀಮ್ ಮುಂತಾದ ಇಸ್ರಾಯೇಲ್ ಕುಲಗಳಲ್ಲಿ ಉಳಿದವರಿಂದಲೂ ಎಲ್ಲಾ ಯೆಹೂದ ಬೆನ್ಯಾಮೀನ್ಯರಿಂದಲೂ ಯೆರೂಸಲೇವಿುನವರಿಂಲೂ ಕೂಡಿಸಿದ್ದ ಹಣವನ್ನು


ಮೋಶೆ ಆ ಮಾತನ್ನು ಕೇಳಿ ಒಪ್ಪಿಕೊಂಡನು.


ಮನುಷ್ಯ ಶವ ಸೋಂಕಿದದರಿಂದ ನಾವು ಅಶುದ್ಧರಾದೆವು. ನಾವು ವಿುಕ್ಕ ಇಸ್ರಾಯೇಲ್ಯರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವದಕ್ಕೆ ಅಪ್ಪಣೆಯಿಲ್ಲವೋ ಎಂದು ಕೇಳಲು ಮೋಶೆ ಅವರಿಗೆ -


ಆದರೆ ಈ ವಿಷಯದಲ್ಲಿ ಯೆಹೋವನು ನನ್ನನ್ನು ಕ್ಷವಿುಸಲಿ; ನನ್ನ ಒಡೆಯನು ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ ನನ್ನ ಕೈಹಿಡಿದು ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವದು. ಈ ಒಂದು ವಿಷಯದಲ್ಲಿ ಮಾತ್ರ ಯೆಹೋವನು ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು