2 ಪೂರ್ವಕಾಲ ವೃತ್ತಾಂತ 30:5 - ಕನ್ನಡ ಸತ್ಯವೇದವು J.V. (BSI)5 ಜನರು ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುಗೆ ಬರಬೇಕು ಎಂಬದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಾಯೇಲ್ಯರೊಳಗೆ ಡಂಗುರಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆವರೆಗೂ ಧರ್ಮಶಾಸ್ತ್ರವಿಧಿಯ ಮೇರೆಗೆ ಪಸ್ಕವನ್ನು ಆಚರಿಸಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದನ್ನು ಬೇರ್ಷೆಬದಿಂದ ಹಿಡಿದು ದಾನ್ ಪಟ್ಟಣದವರೆಗಿನ ಜನರಿಗೆಲ್ಲಾ ಪ್ರಕಟಿಸಿದರು. ಇಸ್ರೇಲಿನ ದೇವರಾದ ಯೆಹೋವನಿಗೆ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಲು ಎಲ್ಲರಿಗೂ ಆಹ್ವಾನಿಸಿದರು. ಮೋಶೆಯು ಹೇಳಿದ್ದ ನಿಯಮಕ್ಕನುಸಾರವಾಗಿ ಪಸ್ಕಹಬ್ಬವನ್ನು ಎಷ್ಟೋ ಜನರು ಅನೇಕ ವರ್ಷಗಳಿಂದ ಆಚರಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ. ಅಧ್ಯಾಯವನ್ನು ನೋಡಿ |