Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 30:7 - ಕನ್ನಡ ಸತ್ಯವೇದವು J.V. (BSI)

7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದ ಕಾರಣ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಇದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 30:7
7 ತಿಳಿವುಗಳ ಹೋಲಿಕೆ  

ಆದದರಿಂದ ಯೆಹೋವನು ಯೆಹೂದದೇಶದ ಮೇಲೆಯೂ ಯೆರೂಸಲೇವಿುನ ಮೇಲೆಯೂ ಕೋಪವುಳ್ಳವನಾಗಿ ಅವುಗಳನ್ನು ಭಯವಿಸ್ಮಯ ಪರಿಹಾಸಗಳಿಗೆ ಆಸ್ಪದಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ನನ್ನ ಮಹತ್ಕೃತ್ಯಗಳನ್ನು ಮರೆಯದೆ ನನ್ನಲ್ಲಿಯೇ ಭರವಸವಿಟ್ಟು ನನ್ನ ಆಜ್ಞೆಗಳನ್ನು ಕೈಕೊಂಡಾರು ಎಂಬದೇ.


ನಮ್ಮ ಪಿತೃಗಳಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡಿಸಿದೆವು.


ಅವನಿಗೆ - ಉಜ್ಜೀಯನೇ, ಯೆಹೋವನಿಗೋಸ್ಕರ ಧೂಪ ಹಾಕುವದು ನಿನ್ನ ಕೆಲಸವಲ್ಲ; ಅದಕ್ಕೋಸ್ಕರ ಆರೋನನ ಸಂತಾನದವರಾದ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟುಹೋಗು; ನೀನು ದ್ರೋಹಿ. ಇದಕ್ಕಾಗಿ ದೇವರಾದ ಯೆಹೋವನಿಂದ ನಿನಗೆ ಮಾನವುಂಟಾಗಲಾರದು ಅನ್ನಲು


ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಹೊಲಸುಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು