Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:13 - ಕನ್ನಡ ಸತ್ಯವೇದವು J.V. (BSI)

13 ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಿಂದ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮೀಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅರಸ ಹಿಜ್ಕೀಯನ ಮತ್ತು ಸರ್ವೇಶ್ವರನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೋನನ್ಯ ಮತ್ತು ಶಿಮ್ಮಿಯು ಈ ಜನರ ಮೇಲ್ವಿಚಾರಕರಾಗಿದ್ದರು; ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಾಕ್ಯ, ಮಹತ್ ಮತ್ತು ಬೆನಾಯ ಇವರನ್ನು ಸಹಾಯಕರಾಗಿ ಅರಸನಾದ ಹಿಜ್ಕೀಯನೂ ದೇವಾಲಯದ ಮೇಲ್ವಿಚಾರಕನಾದ ಅಜರ್ಯನೂ ಆರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನಾದ ಹಿಜ್ಕೀಯನು ನೇಮಿಸಿದ ಪ್ರಕಾರ, ಯೆಹೀಯೇಲ್, ಅಜಜ್ಯ, ನಹತ್, ಅಸಾಯೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ, ಇವರು ಕೋನನ್ಯನ ಸಹೋದರನಾದ ಶಿಮ್ಮಿಯ ಕೈಕೆಳಗೆ ಆಡಳಿತಗಾರರಾಗಿದ್ದರು. ಅಜರ್ಯನು ದೇವರ ಆಲಯದ ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:13
9 ತಿಳಿವುಗಳ ಹೋಲಿಕೆ  

ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯೂ ಆದ ಸೆರಾಯ ಇವರು.


ಯಾಜಕರು ಮತ್ತು ಲೇವಿಯರು ಯೆಹೋವ ಧರ್ಮದಲ್ಲಿ ಆಸಕ್ತರಾಗಿರುವದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇವಿುನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಲಯಾಧಿಪತಿಗಳೂ ದೈವಿಕಕಾರ್ಯಗಳ ಅಧ್ಯಕ್ಷರೂ ಇರುವದರಿಂದ ಉಭಯ ಸಂತಾನಗಳವರು ಸಮಾನಸ್ಥಾನದವರು.


ಯಾಕೀನ್, ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆದ ಅಜರ್ಯ,


ಕೂಡಲೆ ಕೆಹಾತ್ಯರಲ್ಲಿ ಅಮಾಸೈಯ ಮಗನಾದ ಮಹತ್, ಅಜರ್ಯನ ಮಗನಾದ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗನಾದ ಕೀಷ್, ಯೆಹಲ್ಲೆಲೇಲನ ಮಗನಾದ ಅಜರ್ಯ, ಗೆರ್ಷೋನ್ಯರಲ್ಲಿ ಜಿಮ್ಮನ ಮಗನಾದ ಯೋವಾಹ, ಯೋವಾಹನ ಮಗನಾದ ಏದೆನ್,


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಅವನ ಸರದಾರರು ಜನರಿಗೂ ಯಾಜಕರಿಗೂ ಲೇವಿಯರಿಗೂ [ಯಜ್ಞಪಶುಗಳನ್ನು] ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು