Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:14 - ಕನ್ನಡ ಸತ್ಯವೇದವು J.V. (BSI)

14 ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು ಜನರು ಸ್ವೇಚ್ಫೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನೂ ಯೆಹೋವನಿಗೋಸ್ಕರ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧವಸ್ತು ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕೋರೆ ಎಂಬ ಲೇವಿಯು ಜನರು ದೇವರಿಗೆ ಸ್ವ ಇಚ್ಛೆಯಿಂದ ಸಮರ್ಪಿಸಿದ ಕಾಣಿಕೆಗೆ ಮುಖ್ಯಸ್ತನಾಗಿದ್ದನು. ಅವನು ಅದರ ಲೆಕ್ಕವನ್ನು ಒಪ್ಪಿಸುತ್ತಿದ್ದನು. ಅಲ್ಲದೆ ಯೆಹೋವನಿಗೆ ಕೊಟ್ಟವುಗಳನ್ನು ಮತ್ತು ಯೆಹೋವನಿಗೆ ಮೀಸಲಾಗಿಟ್ಟ ಕಾಣಿಕೆಗಳನ್ನು ಹಂಚಿಕೊಡುವುದು ಅವನ ಜವಾಬ್ದಾರಿಕೆಯಾಗಿತ್ತು. ಅಲ್ಲದೆ ಅವನು ಪೂರ್ವದ ಬಾಗಿಲಿನ ದ್ವಾರಪಾಲಕನಾಗಿದ್ದನು. ಅವನು ಲೇವಿಯನಾದ ಇಮ್ನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:14
22 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು; ನಿನ್ನ ವಿಧಿಗಳನ್ನು ನನಗೆ ಕಲಿಸು.


ಆಮೇಲೆ ಉಗ್ರಾಣಗಳನ್ನು ನೋಡುವದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇವಿುಸಿದೆನು; ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವದು ಇವರ ಕರ್ತವ್ಯ.


ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, [ಇಸ್ರಾಯೇಲ್] ಸಾಧಾರಣಜನರೂ ಯಾಜಕರೂ ಯೆರೂಸಲೇವಿುನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವೇಚ್ಫೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.


ಅಂದಿನಿಂದ ನಿತ್ಯಸರ್ವಾಂಗಹೋಮವೂ ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ ಜನರು ಸ್ವೇಚ್ಫೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇವಿುನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯಮಾಡಲಿ ಎಂದು ಪ್ರಕಟಿಸಿದನು.


ಲೇವಿಯರಲ್ಲಿ ಪ್ರತಿದಿನವೂ ಮೂಡಣ ಬಾಗಲನ್ನು ಆರು ಮಂದಿ, ಪಡುವಣ ಬಾಗಲನ್ನು ನಾಲ್ಕು ಮಂದಿ, ತೆಂಕಣ ಬಾಗಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಲುಗಳನ್ನು ಇಬ್ಬಿಬ್ಬರು,


ಮೂಡಣ ದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಪಂಚಾಯತನಾಗಿರುವ ಅವನ ಮಗನಾದ ಜೆಕರ್ಯನ ಹೆಸರಿಗೆ ಬಡಗಣ ದಿಕ್ಕಿನ ಚೀಟು ಬಿದ್ದಿತು.


ಈ ದ್ವಾರಪಾಲಕವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು.


ಆ ಏಳು ವಾರಗಳಾದನಂತರ ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.


ಧಾನ್ಯ, ದ್ರಾಕ್ಷೆ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ ದನಕುರಿಗಳ ಚೊಚ್ಚಲುಮರಿಗಳನ್ನೂ ಹರಕೆಮಾಡಿದ ಪದಾರ್ಥಗಳನ್ನೂ ಕಾಣಿಕೆಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.


ಆ ಸ್ಥಳಕ್ಕೆ ಮಾತ್ರ ನೀವು ಸಮರ್ಪಿಸುವ ಸರ್ವಾಂಗಹೋಮಗಳೇ ಮುಂತಾದ ಯಜ್ಞಗಳ ಪಶುಗಳನ್ನೂ ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ ಹರಕೇ ಮುಡುಪುಗಳನ್ನೂ ಕಾಣಿಕೆಗಳನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ತಂದು


ನೀವು ಕಾಣಿಕೆಯಾಗಿಯಾಗಲಿ ಹರಕೆಯನ್ನು ತೀರಿಸುವದಕ್ಕಾಗಿಯಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯಾರ್ಪಣೆ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.


ಯಾವನಾದರೂ ಮನುಷ್ಯನನ್ನಾಗಲಿ ಪಶುವನ್ನಾಗಲಿ ಪಿತ್ರಾರ್ಜಿತಭೂವಿುಯನ್ನಾಗಲಿ ಬೇರೆ ಯಾವದನ್ನಾಗಲಿ ಕೇವಲ ಯೆಹೋವನದಾಗಿರುವದಕ್ಕೆ ಹರಕೆಮಾಡಿಕೊಟ್ಟರೆ ಅದನ್ನು ಮಾರಲೂ ಕೂಡದು ಬಿಡಿಸಿಕೊಳ್ಳಲೂ ಕೂಡದು. ಕೇವಲ ಯೆಹೋವನದಾಗಿರುವದಕ್ಕೆ ಸಮರ್ಪಿಸುವಂಥದೆಲ್ಲಾ ಯೆಹೋವನಿಗೆ ಮೀಸಲಾಗಿಯೇ ಇರಬೇಕು.


ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.


ನೀನು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ವಾಸಿಸುವ ಇತರರಲ್ಲಿಯಾಗಲಿ ಯಾವನಾದರೂ ಹರಕೆಯಾಗಿ ಅಥವಾ ಕಾಣಿಕೆಯಾಗಿ ಯೆಹೋವನಿಗೆ ಸರ್ವಾಂಗಹೋಮಮಾಡುವಾಗ


ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ.


ಆಶೇರನ ಮಕ್ಕಳಾದ ಇಮ್ನಾ ಇಷ್ವಾ ಇಷ್ವೀ ಬೆರೀಗಾ ಇವರ ತಂಗಿಯಾದ ಸೆರಹ; ಬೆರೀಗನ ಮಕ್ಕಳಾದ ಹೆಬೆರ್ ಮಲ್ಕೀಯೇಲ್, -


ಅರಸನಾದ ಹಿಜ್ಕೀಯನ ಮತ್ತು ಯೆಹೋವನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಿಂದ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರು.


ಇವನ ಕೈಕೆಳಗೆ ಏದೆನ್, ವಿುನ್ಯಾವಿುನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸ ಮಾಡದೆ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು