Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:18 - ಕನ್ನಡ ಸತ್ಯವೇದವು J.V. (BSI)

18 ಲೇವಿಯರು, ಅವರವರ ಹೆಂಡತಿಯರು, ಗಂಡು ಹೆಣ್ಣು ಮಕ್ಕಳು ಅಂತು ತಮ್ಮ ಉದ್ಯೋಗದ ನಿವಿುತ್ತ ತಮ್ಮನ್ನು ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರವರ ಹೆಂಡತಿಯರು, ಗಂಡುಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನು ದೇವರಿಗೆ ನಂಬಿಕೆಯಿಂದ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರವರ ಹೆಂಡತಿಯರು, ಗಂಡು-ಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನೇ ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಲೇವಿಯರ ಹೆಂಡತಿಯರಿಗೂ ಮಕ್ಕಳಿಗೂ ಎಲ್ಲರಿಗೂ ಅದರಲ್ಲಿ ಪಾಲು ದೊರೆಯಿತು. ಯಾರ್ಯಾರ ಹೆಸರುಗಳು ಲೇವಿಯರ ಕುಟುಂಬದ ಪಟ್ಟಿಯಲ್ಲಿ ಬರೆಯಲ್ಪಟ್ಟಿತ್ತೊ ಅವರೆಲ್ಲರಿಗೆ ಪಾಲು ದೊರೆಯಿತು. ಯಾಕೆಂದರೆ ಲೇವಿಯರು ತಮ್ಮನ್ನು ದೇವಾಲಯದ ಸೇವೆಗೆ ಯಾವಾಗಲೂ ಸಿದ್ಧಪಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:18
6 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ಇವನ ಕೈಕೆಳಗೆ ಏದೆನ್, ವಿುನ್ಯಾವಿುನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸ ಮಾಡದೆ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.


ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಮಂದಿ; ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಗಳಲ್ಲಿ ಲಿಖಿತವಾಗಿದ್ದವು. ದಾವೀದನೂ ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೋಗಕ್ಕೆ ನೇವಿುಸಿದರು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರವಾಗಿಯೂ ಆಯಾ ಉದ್ಯೋಗವರ್ಗಗಳಿಗನುಸಾರವಾಗಿಯೂ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಯಾಜಕರು,


ಇದಲ್ಲದೆ ಆರೋನನ ಸಂತಾನದವರಾದ ಯಾಜಕರ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವದಕ್ಕೆ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಪುರುಷರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು