Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:19 - ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಆರೋನನ ಸಂತಾನದವರಾದ ಯಾಜಕರ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವದಕ್ಕೆ ಹೆಸರು ಹೆಸರಾಗಿ ನೇವಿುಸಲ್ಪಟ್ಟ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದಲ್ಲದೆ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದ ಆರೋನನ ಸಂತಾನದ ಯಾಜಕರಿಗೆ ಪಾಲುಕೊಡುತ್ತಿದ್ದರು. ಯಾಜಕ ಸಂತಾನದ ಎಲ್ಲ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸಲಾದ ಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆರೋನನ ಸಂತತಿಯ ಕೆಲವು ಯಾಜಕರಿಗೆ ಲೇವಿಯರು ವಾಸಿಸುತ್ತಿದ್ದ ಪಟ್ಟಣಗಳ ಹತ್ತಿರ ಹೊಲಗಳಿದ್ದವು. ಆರೋನನ ಸಂತತಿಯವರಲ್ಲಿ ಕೆಲವರು ಲೇವಿಯರ ಪಟ್ಟಣಗಳಲ್ಲಿಯೂ ವಾಸಮಾಡುತ್ತಿದ್ದರು. ಈ ಆರೋನನ ಸಂತತಿಯವರಿಗೆ ಪಾಲು ಕೊಡಲು ಕೆಲವರನ್ನು ನೇಮಿಸಲಾಯಿತು. ಗಂಡಸರಿಗೆ ಮತ್ತು ವಂಶಾವಳಿಯಲ್ಲಿ ಹೆಸರನ್ನು ಹೊಂದಿದ್ದ ಎಲ್ಲಾ ಲೇವಿಯರಿಗೆ ಸಂಗ್ರಹಿಸಲ್ಪಟ್ಟಿದ್ದರಲ್ಲಿ ಅವರವರ ಪಾಲು ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:19
8 ತಿಳಿವುಗಳ ಹೋಲಿಕೆ  

ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅವು ಅವರಿಗೆ ಶಾಶ್ವತವಾದ ಸ್ವಾಸ್ತ್ಯ.


ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವದಕ್ಕೆ ಬಟ್ಟೆಗಳನ್ನೂ ಕಾಲಿಗೆ ಕೆರಗಳನ್ನೂ ಕೊಟ್ಟು ಅನ್ನಪಾನಗಳನ್ನಿತ್ತು ತೈಲಹಚ್ಚಿ ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರಕೊಂಡುಹೋಗಿ ಅವರ ಬಂಧುಗಳ ಹತ್ತಿರ ಬಿಟ್ಟು ಸಮಾರ್ಯಕ್ಕೆ ಹಿಂದಿರುಗಿದರು.


ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು.


ಅವರು ವಾಸಿಸತಕ್ಕ ಪ್ರಾಂತನಗರಗಳು - ಆರೋನನ ಸಂತಾನದವರಾದ ಕೆಹಾತನ ಗೋತ್ರದವರಿಗೆ ಚೀಟು ಮೊದಲು ಬಿದ್ದದರಿಂದ


ಲೇವಿಯರು, ಅವರವರ ಹೆಂಡತಿಯರು, ಗಂಡು ಹೆಣ್ಣು ಮಕ್ಕಳು ಅಂತು ತಮ್ಮ ಉದ್ಯೋಗದ ನಿವಿುತ್ತ ತಮ್ಮನ್ನು ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)


ಆದರೆ ಲೇವಿಯರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು