2 ಪೂರ್ವಕಾಲ ವೃತ್ತಾಂತ 31:2 - ಕನ್ನಡ ಸತ್ಯವೇದವು J.V. (BSI)2 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ ಸರ್ವಾಂಗಹೋಮ ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸುವದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವದಕ್ಕೂ ನೇವಿುಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ಸರ್ವಾಂಗಹೋಮ, ಸಮಾಧಾನ ಯಜ್ಞ, ಇವುಗಳನ್ನು ಸಮರ್ಪಿಸುವುದಕ್ಕೂ ಯೆಹೋವನ ಪಾಳೆಯದ ದ್ವಾರಗಳಲ್ಲಿ ಸೇರಿ ಯೆಹೋವನನ್ನು ಆರಾಧಿಸುತ್ತಾ, ಕೀರ್ತಿಸುತ್ತಾ, ಕೃತಜ್ಞತಾಸ್ತುತಿಮಾಡುತ್ತಾ ಇರುವುದಕ್ಕೂ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಜಕರೂ ಲೇವಿಯರೂ ಬೇರೆಬೇರೆ ಗುಂಪುಗಳಾಗಿ ವಿಭಾಗಿಸಲ್ಪಟ್ಟಿದ್ದರು. ಪ್ರತಿಯೊಂದು ಗುಂಪಿನವರಿಗೂ ಪ್ರತ್ಯೇಕವಾದ ಸೇವಾಕಾರ್ಯವು ಕೊಡಲ್ಪಟ್ಟಿತ್ತು. ಅರಸನಾದ ಹಿಜ್ಕೀಯನು ಅವರ ಕೆಲಸಗಳನ್ನು ಮತ್ತೆ ಪ್ರಾರಂಭಿಸಲು ಈ ಗುಂಪಿನವರಿಗೆ ಹೇಳಿದನು. ಹೀಗೆ ಯಾಜಕರೂ ಲೇವಿಯರೂ ಮತ್ತೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುತ್ತಿದ್ದರು. ಅಲ್ಲದೆ ದೇವಾಲಯದೊಳಗೆ ದೇವರಿಗೆ ಸ್ತುತಿಗೀತೆ ಹಾಡುವ ಕೆಲಸವೂ ಅವರದೇ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು. ಅಧ್ಯಾಯವನ್ನು ನೋಡಿ |
ಇದಲ್ಲದೆ ತನ್ನ ತಂದೆಯಾದ ದಾವೀದನ ವಿಧಿಗನುಸಾರವಾಗಿ ಯಾಜಕವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇವಿುಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರತಿಯ ಮೇಲೆ ಆಯಾ ಬಾಗಲುಗಳನ್ನು ಕಾಯುತ್ತಲೂ ಇರಬೇಕಾಯಿತು. ಇದೇ ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ.