Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 31:3 - ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಅವನು ಯೆಹೋವನ ಧರ್ಮಶಾಸ್ತ್ರವಿಧಿಗನುಸಾರವಾಗಿ ಪ್ರಾತಃಕಾಲ ಸಾಯಂಕಾಲ ಸಬ್ಬತ್‍ದಿನ ಅಮಾವಾಸ್ಯೆ ಜಾತ್ರೆ ಇವುಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗೋಸ್ಕರ ಆಗಬೇಕಾದದ್ದೆಲ್ಲಾ ತನ್ನ ಆಸ್ತಿಯಿಂದ ಸಲ್ಲಿಸಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ, ಅರಸನು ಯೆಹೋವನ ಧರ್ಮಶಾಸ್ತ್ರದ ವಿಧಿಗನುಸಾರವಾಗಿ ಪ್ರಾತಃಕಾಲ, ಸಾಯಂಕಾಲ, ಸಬ್ಬತ್ ದಿನ, ಅಮಾವಾಸ್ಯೆ ಹಾಗು ಹಬ್ಬಗಳಲ್ಲಿ ಸಮರ್ಪಣೆಯಾಗತಕ್ಕ ಸರ್ವಾಂಗಹೋಮಗಳಿಗಾಗಿ ಆಗಬೇಕಾದ ಎಲ್ಲವನ್ನು ತನ್ನ ಸ್ವಂತ ಆಸ್ತಿಯಿಂದಲೇ ಸಲ್ಲಿಸಬೇಕು ಎಂದು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 31:3
13 ತಿಳಿವುಗಳ ಹೋಲಿಕೆ  

ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.


ಯೋಷೀಯನು ಹಬ್ಬಕ್ಕೆ ಬಂದ ಜನರಿಗೆ ಪಸ್ಕ ಯಜ್ಞಕ್ಕಾಗಿ ರಾಜಕೀಯ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.


ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ಗೊತ್ತುಮಾಡಿಕೊಂಡು ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಶೆಲೋಮೋತನೂ ಅವನ ಸಹೋದರರೂ ಪ್ರತಿಷ್ಠಿತವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರಬಂಧುಗಳು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಆರನೆಯ ದಿನದಲ್ಲಿ ನೀವು ನಿತ್ಯಸರ್ವಾಂಗಹೋಮವನ್ನೂ ಅದಕ್ಕೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಎಂಟು ಹೋರಿ, ಎರಡು ಟಗರು, ಹದಿನಾಲ್ಕು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನೂ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು