2 ಪೂರ್ವಕಾಲ ವೃತ್ತಾಂತ 31:6 - ಕನ್ನಡ ಸತ್ಯವೇದವು J.V. (BSI)6 ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ಯರೂ ಯೆಹೂದ್ಯರೂ ಕುರಿದನಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೂದದ ಪಟ್ಟಣಗಳಲ್ಲಿ ವಾಸಿಸುತ್ತಿರುವ ಇಸ್ರಾಯೇಲರೂ ಯೆಹೂದ್ಯರೂ ಕುರಿದನ ಹಿಂಡುಗಳಲ್ಲಿ ದಶಮಾಂಶವನ್ನು ಕೊಟ್ಟದ್ದಲ್ಲದೆ, ದೇವರಾದ ಯೆಹೋವನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜುದೇಯದ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರೂ ಯೆಹೂದ್ಯರೂ ಕುರಿದನಗಳಲ್ಲಿ ದಶಮಾಂಶವನ್ನೂ ಕೊಟ್ಟದ್ದಲ್ಲದೆ, ದೇವರಾದ ಸರ್ವೇಶ್ವರನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇಸ್ರೇಲಿನ ಮತ್ತು ಯೆಹೂದದ ಊರುಗಳಲ್ಲಿ ವಾಸವಾಗಿದ್ದ ಜನರು ತಮ್ಮ ದನಕರುಗಳಲ್ಲಿ ಮತ್ತು ಕುರಿಗಳಲ್ಲಿ ದಶಾಂಶವನ್ನು ತಂದುಕೊಟ್ಟರು. ಯೆಹೋವನಿಗೆ ಮೀಸಲಾಗಿ ವಿಶೇಷ ಸ್ಥಳದಲ್ಲಿ ಇಡತಕ್ಕ ಪವಿತ್ರ ವಸ್ತುಗಳಲ್ಲಿಯೂ ದಶಾಂಶವನ್ನು ತಂದುಕೊಟ್ಟರು. ಇವುಗಳನ್ನೆಲ್ಲ ಅವರು ತಮ್ಮ ದೇವರಾದ ಯೆಹೋವನಿಗೆ ತಂದು ರಾಶಿ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲರು ಯೆಹೂದ್ಯರು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶಮಾಂಶದ ಪಾಲು ತಂದು, ರಾಶಿರಾಶಿಯಾಗಿ ಇಟ್ಟರು. ಅಧ್ಯಾಯವನ್ನು ನೋಡಿ |