2 ಪೂರ್ವಕಾಲ ವೃತ್ತಾಂತ 31:8 - ಕನ್ನಡ ಸತ್ಯವೇದವು J.V. (BSI)8 ಹಿಜ್ಕೀಯನೂ ಪ್ರಭುಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಹರಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಿಜ್ಕೀಯನೂ ಮತ್ತು ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಯೆಹೋವನನ್ನು ಕೊಂಡಾಡಿ ಆತನ ಪ್ರಜೆಗಳಾದ ಇಸ್ರಾಯೇಲರನ್ನು ಹರಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹಿಜ್ಕೀಯನೂ ಪ್ರಧಾನರೂ ಜನರ ಕಾಣಿಕೆಯ ರಾಶಿಯನ್ನು ನೋಡಿ ಯೆಹೋವನಿಗೆ ಸ್ತೋತ್ರ ಮಾಡಿದರು ಮತ್ತು ಅದನ್ನು ಅರ್ಪಿಸಿದ ಜನರಿಗಾಗಿ ಸ್ತೋತ್ರ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರೇ, ನೀವು ಎಷ್ಟೋ ಧನ್ಯರು; ನಿಮ್ಮಷ್ಟು ಭಾಗ್ಯವಂತರು ಯಾರಿದ್ದಾರೆ? ನೀವು ಯೆಹೋವನ ಅನುಗ್ರಹದಿಂದ ಜಯವನ್ನು ಹೊಂದಿದವರು. ಆತನೇ ನಿಮ್ಮನ್ನು ಕಾಯುವ ಡಾಲೂ ನಿಮ್ಮ ಗೌರವವನ್ನು ಕಾಪಾಡುವ ಕತ್ತಿಯೂ ಆಗಿದ್ದಾನೆ. ಆದದರಿಂದ ನಿಮ್ಮ ಶತ್ರುಗಳು ನಿಮ್ಮ ಮುಂದೆ ಮುದುರಿಕೊಳ್ಳುತ್ತಾರೆ; ನೀವೋ ಅವರಿಗಿದ್ದ ಎತ್ತರವಾದ ಸೀಮೆಯಲ್ಲಿ ಜಯಶಾಲಿಗಳಾಗಿ ಸಂಚರಿಸುತ್ತೀರಿ.