2 ಪೂರ್ವಕಾಲ ವೃತ್ತಾಂತ 32:11 - ಕನ್ನಡ ಸತ್ಯವೇದವು J.V. (BSI)11 ಹಿಜ್ಕೀಯನು - ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವದಕ್ಕೆ ಪ್ರಯತ್ನಿಸುತ್ತಿರುವದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವದಕ್ಕೇ ಅಲ್ಲವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹಿಜ್ಕೀಯನು, ‘ನಮ್ಮ ದೇವರಾದ ಸರ್ವೇಶ್ವರಸ್ವಾಮಿ ಅಸ್ಸೀರಿಯಾದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು,’ ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕೇ ಅಲ್ಲದೆ ಮತ್ತೇನಕ್ಕೂ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಿಜ್ಕೀಯನು ನಿಮ್ಮನ್ನು ಮೋಸಪಡಿಸುತ್ತಿದ್ದಾನೆ. ನೀವು ಜೆರುಸಲೇಮಿನಲ್ಲಿಯೇ ಇರುವಂತೆ ಹೇಳಿ ನಿಮಗೆ ಮೋಸಮಾಡುತ್ತಿದ್ದಾನೆ. ಹಾಗೆ ಮಾಡಿದರೆ ನೀವು ಅನ್ನನೀರಿಲ್ಲದೆ ಸಾಯುವಿರಿ. ನಿಮಗೆ ಹಿಜ್ಕೀಯನು, “ನಮ್ಮ ದೇವರಾದ ಯೆಹೋವನು ಅಶ್ಶೂರದ ರಾಜನಿಂದ ಕಾಪಾಡುವನು” ಎಂದು ಹೇಳುತ್ತಾನಲ್ಲಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ? ಅಧ್ಯಾಯವನ್ನು ನೋಡಿ |