2 ಪೂರ್ವಕಾಲ ವೃತ್ತಾಂತ 32:14 - ಕನ್ನಡ ಸತ್ಯವೇದವು J.V. (BSI)14 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವದಕ್ಕೆ ಸಮರ್ಥನಾಗಿದ್ದನು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವದಕ್ಕೆ ಶಕ್ತನಾಗಿರುವನೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ರಾಜ್ಯಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿರುತ್ತಾನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಪೂರ್ವಿಕರು ಆ ದೇಶಗಳನ್ನು ನಾಶಮಾಡಿದರು. ಯಾವ ದೇವರೂ ತನ್ನ ಜನರನ್ನು ನಾನು ನಾಶಮಾಡದಂತೆ ನನ್ನನ್ನು ತಡೆಯಲು ಸಾಧ್ಯವಿಲ್ಲ. ನಿಮ್ಮ ದೇವರು ನನ್ನಿಂದ ನಿಮ್ಮನ್ನು ಕಾಪಾಡುವನು ಎಂದು ನೀವು ನೆನಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ? ಅಧ್ಯಾಯವನ್ನು ನೋಡಿ |