2 ಪೂರ್ವಕಾಲ ವೃತ್ತಾಂತ 32:15 - ಕನ್ನಡ ಸತ್ಯವೇದವು J.V. (BSI)15 ನೀವು ಹಿಜ್ಕೀಯನಿಂದ ಮರುಳಾಗಿ ಈ ಪ್ರಕಾರ ಮೋಸಹೋಗಬೇಡಿರಿ. ಅವನನ್ನು ನಂಬಲೂಬೇಡಿರಿ. ಯಾವ ರಾಜ್ಯ ಜನಾಂಗಗಳ ದೇವತೆಯಾದರೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದ ಮೇಲೆ ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?". ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹಿಜ್ಕೀಯನು ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ, ಅವನನ್ನು ನಂಬಬೇಡಿರಿ. ಯಾವ ದೇಶದ ದೇವರಿಗಾಗಲಿ ಅವನ ಜನರಿಗಾಗಲಿ ನನ್ನನ್ನು ನನ್ನ ಪೂರ್ವಿಕರನ್ನು ತಡೆಯಲು ಸಾಧ್ಯವಾಗಲಿಲ್ಲ. ನಿಮ್ಮ ದೇವರೂ ನನ್ನನ್ನು ತಡೆಯಲು ಸಾಧ್ಯವಿಲ್ಲ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |